ತುಮಕೂರು: ಮಕ್ಕಳ ಕಲಿಕೆ, ಅವರ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಮೊದಲ ಹೆಜ್ಜೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅಭಿಪ್ರಾಯಪಟ್ಟರು.

ನಗರದಲ್ಲಿ ಈಚೆಗೆ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್.ಸಿದ್ದರಾಮಣ್ಣ, ‘ಮಕ್ಕಳು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ. ಮಕ್ಕಳು ಕ್ರಿಯಾಶೀಲರಾಗಿ ಇರಲು ಶಿಬಿರ ನೆರವಾಗುತ್ತದೆ. ಪೋಷಕರು ಮಕ್ಕಳ ಆಸಕ್ತಿ ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು’ ಎಂದು ಸಲಹೆ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಆರ್.ಎಂ.ದಿನೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್.ಜಿ.ಪವಿತ್ರಾ, ತರಬೇತುದಾರರಾದ ಪ್ರಕಾಶ್, ಸೌಮ್ಯಾ, ಚೇತನ್, ಕಾಂತರಾಜು, ಕಾರ್ಯಕ್ರಮ ಸಂಯೋಜಕಿ ಪಿ.ಮಮತಾ, ಕಾರ್ಯಕ್ರಮ ಸಹಾಯಕಿ ಜಿ.ಎಸ್.ಶಿಲ್ಪಾ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-17-1196764023

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.