ಬುಧವಾರ, ಏಪ್ರಿಲ್ 1, 2020
19 °C

ಥರ್ಮಲ್ ಸ್ಕ್ಯಾನಿಂಗ್ ಮಾಡುವಾಗ ಉದಾಸೀನತೆ: ಸಿಬ್ಬಂದಿ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದ ರೈಲ್ವೆ ನಿಲ್ದಾಣದಲ್ಲಿ ಕೊರೊನಾ ಸೋಂಕು ತಡೆಗಟ್ಟಲು  ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡುವಾಗ ಉದಾಸೀನತೆ ತೋರಿದ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತ್ತು ಮಾಡಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಂದ್ರಿಕಾ ಆದೇಶಿಸಿದ್ದಾರೆ.

ತುಮಕೂರು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿಯ ಕಿರಿಯ ಆರೋಗ್ಯ ಸಹಾಯಕ ಎ.ನರಸಿಂಹಮೂರ್ತಿ ಅಮಾನತ್ತುಗೊಂಡ ಸಿಬ್ಬಂದಿ.

ಇವರು ನಗರದ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುವಾಗ ಉದಾಸೀನತೆ ತೋರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗಿತ್ತು.

ಕೊರೊನಾ ವೈರಸ್ ಸೋಂಕಿನಿಂದ ಜನರನ್ನು ಪಾರು ಮಾಡಲು ಸಾವಿರಾರು ಮಂದಿ ಅಧಿಕಾರಿಗಳು, ವೈದ್ಯರು ಹಾಗೂ ಸಿಬ್ಬಂದಿ ಊಟ, ನಿದ್ರೆ ಬಿಟ್ಟು ಹಗಲು ರಾತ್ರಿ ದುಡಿಯುತ್ತಿದ್ದಾರೆ. ಆದರೆ ತಮಗೆ ಒಪ್ಪಿಸಿದ ಒಂದು ಸಣ್ಣ ಜವಾಬ್ದಾರಿಯನ್ನು ಈ ಅಧಿಕಾರಿ ಎಷ್ಟು ಬೇಜವಬ್ದಾರಿಯಿಂದ ನಿರ್ವಹಿಸುತ್ತಿದ್ದಾರೆ. ಸಾವಿರಾರು ಜನರ‌ ಶ್ರಮ ಹಾಳು ಮಾಡಲು ಇಂತಹ ಒಬ್ಬರು ಸಾಕಲ್ಲವೇ? ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು