ಸಿ.ಎಸ್ ಪುರ (ಗುಬ್ಬಿ): ಭದ್ರಕಾಳಿ ಸಮೇತ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತುರುವೇಕೆರೆ ಮಾಜಿ ಶಾಸಕ ಮಸಾಲೆ ಜಯರಾಮ್ ತಿಳಿಸಿದರು.

ಸೋಮವಾರ ಗುಬ್ಬಿ ತಾಲ್ಲೂಕು ಸಿ.ಎಸ್ ಪುರ ಹೋಬಳಿ ವೀರಣ್ಣನ ಗುಡಿಯಲ್ಲಿ ಏರ್ಪಡಿಸಿದ್ದ ಜಾತ್ರಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜಾತ್ರಾ ಮಹೋತ್ಸವದ ಕೇಂದ್ರಬಿಂದುವಾದ ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಭಕ್ತಾದಿಗಳಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳಿಗೆ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಧಾರ್ಮಿಕ, ಸಾಂಸ್ಕೃತಿಕ ಹಾಗೂ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ. ಹೋಮ, ಹವನ, ಅರ್ಚನೆಗಳನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್ 2ರಂದು ರಥೋತ್ಸವ ನಡೆಯಲಿದೆ ಎಂದು ತಿಳಿಸಿದರು.

ವೀರಭದ್ರಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷ ವಿ.ಪುಟ್ಟಸ್ವಾಮಿ, ಕಾರ್ಯದರ್ಶಿ ವಿಶ್ವನಾಥ್, ಸದಸ್ಯ ವಿ.ಡಿ ರಾಮು, ಶಿವಶಂಕರ್, ಕೃಷ್ಣಮೂರ್ತಿ, ಜೆ.ಬಿ ಲೋಕೇಶ್, ಶಿವಪ್ರಸಾದ್, ಲಕ್ಷ್ಮಣ, ಅಂಜಿನಪ್ಪ, ಶ್ರೀಧರ ದೀಕ್ಷಿತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-17-1824417514

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.