ದಂಡಿನಶಿವರ(ತುರುವೇಕೆರೆ): ತಾಲ್ಲೂಕಿನ ದಂಡಿನಶಿವರದಲ್ಲಿ ₹2 ಕೋಟಿ ವೆಚ್ಚದಲ್ಲಿ ಸರ್ಕಾರಿ ಬಸ್ ನಿಲ್ದಾಣ ಮಾಡಬೇಕೆಂಬ ಬಯಕೆ ಇದೆ. ಆದರೆ ನಿವೇಶನದ ಸಮಸ್ಯೆ ಇರುವುದರಿಂದ ತಡವಾಗಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ತಾಲ್ಲೂಕಿನ ದಂಡಿನಶಿವರದಲ್ಲಿ ಇನ್ನರ್ವ್ಹೀಲ್ ಕ್ಲಬ್ ಆಫ್ ಸಂಕಲ್ಪ ವತಿಯಿಂದ ನಿರ್ಮಿಸಿರುವ ಪ್ರಯಾಣಿಕರ ವಿಶ್ರಾಂತಿ ತಾಣ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಹೋಬಳಿ ಕೇಂದ್ರದಲ್ಲಿ ಉತ್ತಮ ಬಸ್ ನಿಲ್ದಾಣದ ಅಗತ್ಯವಿದೆ. ಸ್ಥಳಾವಕಾಶ ಕೊರತೆಯಿಂದ ಬಸ್ ನಿಲ್ದಾಣ ಇದುವರೆಗೆ ಮಾಡಲಾಗಿಲ್ಲ. ಸದ್ಯ ಬಸ್ಗಳು ನಿಲ್ಲುತ್ತಿರುವ ಸ್ಥಳ ಶಿಕ್ಷಣ ಇಲಾಖೆಗೆ ಸೇರಿದೆ. ಶಿಕ್ಷಣ ಇಲಾಖೆಯವರು ಜಮೀನು ನೀಡಿದರೆ ಸಾರಿಗೆ ಸಚಿವರ ಬಳಿ ಮಾತನಾಡಿ ₹2 ಕೋಟಿ ವೆಚ್ಚದಲ್ಲಿ ಉತ್ತಮ ಬಸ್ ನಿಲ್ದಾಣ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಇನ್ನರ್ವ್ಹೀಲ್ ಅಧ್ಯಕ್ಷೆ ಇಂದಿರಾ ಪ್ರಭಾಕರ್, ಸಿದ್ದೇಗೌಡ, ಶಂಕರೇಗೌಡ, ಕ್ಲಬ್ ಸ್ಥಾಪಕ ಅಧ್ಯಕ್ಷೆ ಗೀತಾ ಸುರೇಶ್, ಗೌರವ ಸಲಹೆಗಾರ್ತಿ ಆಶಾಚೌದ್ರಿ, ಪಿಡಿಒ ಸಾವಿತ್ರಮ್ಮ, ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಗುಪ್ತಾ, ಎನ್.ಆರ್. ಜಯರಾಮ್, ಗ್ಯಾಸ್ ಪ್ರಭು, ಇನ್ನರ್ವ್ಹೀಲ್ ಕಾರ್ಯದರ್ಶಿ ಮಮತ ಅಶೋಕ್, ಸ್ವಾಗತ ಸಮಿತಿ ಅಧ್ಯಕ್ಷೆ ಲತಾ ಪ್ರಸನ್ನಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-17-1712115039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.