ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಜಿಲ್ಲೆಗೆ ಬಂದು ಎರಡು ವರ್ಷ ಕಳೆದಿದ್ದು, ನಿಯಮದ ಪ್ರಕಾರ ಕರ್ತವ್ಯದ ಅವಧಿ ಮುಗಿದಿದೆ. ಕೂಡಲೇ ಇವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್ಎಸ್) ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.

‘ತಮ್ಮ ಕಚೇರಿಯ ನೌಕರನೊಬ್ಬ ಜಿಲ್ಲಾಧಿಕಾರಿ ಡಿಜಿಟಲ್ ಸಹಿ ಬಳಸಿ, ಸರ್ಕಾರಿ ಭೂಮಿ ಪರಭಾರೆ ಮಾಡಿದ್ದರು. ಈ ಅಕ್ರಮದಲ್ಲಿ ಜಿಲ್ಲಾಧಿಕಾರಿ ಭಾಗಿಯಾಗಿದ್ದಾರೆ. ಜತೆಗೆ ಪ್ರತಿಭಟನೆಗೆ ಅನುಮತಿ ಪಡೆಯಬೇಕು ಎಂದು ಸುತ್ತೋಲೆ ಹೊರಡಿಸಿ, ಹೋರಾಟ ಹತ್ತಿಕ್ಕುತ್ತಿದ್ದಾರೆ. ಗಣಿ ಬಾಧಿತ ಪ್ರದೇಶದ ಕಾಮಗಾರಿಗಳಲ್ಲೂ ಅಕ್ರಮ, ಅವೈಜ್ಞಾನಿಕ ಹಾಗೂ ಕಳಪೆ ನಡೆದಿವೆ’ ಎಂದು ಕೆಆರ್ಎಸ್ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ ಆರೋಪಿಸಿದರು.

ಜಿಲ್ಲೆಯ ಐಪಿಎಸ್, ಐಎಎಸ್ ಅಧಿಕಾರಿಗಳು ಅಭಿವೃದ್ಧಿ ಕೆಲಸ ಮರೆತು ಈವೆಂಟ್ ಮ್ಯಾನೇಜರ್ಗಳ ರೀತಿ ಕೆಲಸ ಮಾಡುತ್ತಿದ್ದಾರೆ. ದಸರಾ, ಕ್ರೀಡಾಕೂಟ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆಡಳಿತಕ್ಕೆ ಸಮಯ ನೀಡುತ್ತಿಲ್ಲ ಎಂದು ದೂರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-17-1542742821

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.