ತುಮಕೂರು: ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಕೇಂದ್ರ ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಏಕರೂಪ್ ಕೌರ್ ಸೋಮವಾರ ಪರಿಶೀಲಿಸಿದರು.

ತುಮಕೂರು, ಕೊರಟಗೆರೆ ಭಾಗದಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಯಡಿ ಕೈಗೊಂಡ ಕಾಮಗಾರಿ ವೀಕ್ಷಿಸಿದರು. ತಾಲ್ಲೂಕಿನ ಮಾಕೇನಹಳ್ಳಿ ಹತ್ತಿರ ಬದು ನಿರ್ಮಾಣ, ಊರ್ಡಿಗೆರೆ ಗ್ರಾಮದ ಚೆಕ್ ಡ್ಯಾಮ್ ಕಾಮಗಾರಿ ಪರಿಶೀಲನೆ ನಡೆಸಿದರು. ಕೊರಟಗೆರೆ ತಾಲ್ಲೂಕಿನ ಚಿನ್ನೇನನಳ್ಳಿ, ಲಕ್ಕಯ್ಯನಪಾಳ್ಯ, ಪಾತಗಾನಹಳ್ಳಿಯಲ್ಲಿ ಫಲಾನುಭವಿಗಳ ಜತೆ ಸಂವಾದ ನಡೆಸಿದರು.

ಇದಾದ ಬಳಿಕ ನಗರದ ಜಿ.ಪಂ ಕಚೇರಿಯಲ್ಲಿ ಅಧಿಕಾರಿಗಳ ಜತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ‘ಸಾವಯವ ಕೃಷಿಗೆ ಒತ್ತು ನೀಡಬೇಕು. ಯೂರಿಯಾ ಸೇರಿದಂತೆ ರಸಗೊಬ್ಬರ ಬಳಕೆ ಕಡಿಮೆ ಮಾಡಬೇಕು. ಈ ಕುರಿತು ರೈತರಿಗೆ ಶಿಕ್ಷಣ, ಮಾಹಿತಿ ಒದಗಿಸಿ, ಅವರ ಮನವೊಲಿಸಬೇಕು’ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ರಾಗಿ, ತೆಂಗು ಬೆಳೆಗಾರರು ಹೆಚ್ಚಿದ್ದು ಅವರಿಗೆ ವೈಜ್ಞಾನಿಕ ಕೃಷಿಗೆ ಪ್ರೋತ್ಸಾಹಿಸಬೇಕು. ಸಿರಿ ಧಾನ್ಯ ಬೆಳೆಯಲು ಹೆಚ್ಚಿನ ಅವಕಾಶಗಳಿದ್ದು, ರೈತರಿಗೆ ಅಗತ್ಯ ಮಾಹಿತಿ ಮಾರ್ಗದರ್ಶನ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಉಪ ಕಾರ್ಯದರ್ಶಿ ಈಶ್ವರಪ್ಪ, ಕೃಷಿ ಜಂಟಿ ನಿರ್ದೇಶಕ ಲಕ್ಷ್ಮಣ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಬಿ.ಸಿ.ಶಾರದಮ್ಮ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-17-1926496450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.