ತುಮಕೂರು: ಜಿಲ್ಲೆಯ ಹೆಸರನ್ನು ‘ಬೆಂಗಳೂರು ಉತ್ತರ’ ಎಂದು ಬದಲಾವಣೆ ಮಾಡುವುದಕ್ಕೆ ಪ್ರಗತಿಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ನಗರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮುಖಂಡರು ಹೋರಾಟದ ಎಚ್ಚರಿಕೆ ನೀಡಿದರು. ಹೆಸರು ಬದಲಾವಣೆ ಪ್ರಸ್ತಾವನೆಯ ನೀಲನಕ್ಷೆ ನೀಡುವಂತೆ ಒತ್ತಾಯಿಸಿದರು.

‘ಜಿಲ್ಲೆಯ ಸಾಂಸ್ಕೃತಿಕ ವೈಶಿಷ್ಟ್ಯತೆ, ಅಸ್ಮಿತೆ ಅಳಿಸಲಾಗುತ್ತಿದೆ. ‘ಬೆಂಗಳೂರು ಉತ್ತರ’ ಎಂಬ ಹೆಸರಿನಲ್ಲಿ ಜಿಲ್ಲೆಯ ಗುರುತನ್ನೇ ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಇದು ಜನರ ಭಾವನೆಗಳಿಗೆ ಮಾಡಿದ ಅವಮಾನ’ ಎಂದು ಲೇಖಕಿ ಬಾ.ಹ.ರಮಾಕುಮಾರಿ ಅಸಮಾಧಾನ ವ್ಯಕ್ತಪಡಿಸಿದರು.

ಪಿಯುಸಿಎಲ್ ಅಧ್ಯಕ್ಷ ಕೆ.ದೊರೈರಾಜ್, ‘ಸರ್ಕಾರ ರೈತರ, ಕಾರ್ಮಿಕರ ಸಮಸ್ಯೆ ಬಗೆಹರಿಸಲು ವಿಫಲವಾಗಿದ್ದು, ಹೆಸರು ಬದಲಾವಣೆಯ ರಾಜಕಾರಣ ಮಾಡುತ್ತಿದೆ. ಇದರಿಂದ ಯಾರಿಗೆ ಲಾಭ ಎಂಬುವುದನ್ನು ಸ್ಪಷ್ಟಪಡಿಸಬೇಕು. ಸಾರ್ವಜನಿಕರ ಅಭಿಪ್ರಾಯ ಪಡೆಯದೆ ನಿರ್ಧಾರ ಕೈಗೊಂಡರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

ಪರಿಸರವಾದಿ ಸಿ.ಯತಿರಾಜು, ‘ಜಿಎಸ್ಟಿ ಜಾರಿಯಾದ ನಂತರ ರಾಜ್ಯಗಳ ಆರ್ಥಿಕ ಸ್ವಾಯತ್ತತೆ ಕುಸಿದಿದೆ. ಜನರ ಬದುಕಿನ ಪ್ರಶ್ನೆಗಳಿಗೆ ಉತ್ತರ ನೀಡಲು ಸರ್ಕಾರ ವಿಫಲವಾಗಿದೆ. ಈಗ ಜಿಲ್ಲೆಯ ಹೆಸರು ಬದಲಿಸಿ, ರಾಜಕೀಯ ಲಾಭ ಪಡೆಯಲು ಹೊರಟಿದೆ. ತುಮಕೂರಿನ ಅಸ್ತಿತ್ವದ ಮೇಲೆ ದಾಳಿ ಮಾಡುವ ಪ್ರಸ್ತಾವನೆ ಕೈ ಬಿಡಬೇಕು’ ಎಂದು ಆಗ್ರಹಿಸಿದರು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್, ವಿವಿಧ ಸಂಘಟನೆಗಳ ಮುಖಂಡರಾದ ಎನ್.ಕೆ.ಸುಬ್ರಮಣ್ಯ, ಅರುಣ್, ಅರುಂಧತಿ, ಜೈರಾಮ್, ರಾಮಾಂಜಿನಪ್ಪ, ತಾಜುದ್ದೀನ್ ಷರೀಫ್, ಕಂಬೇಗೌಡ, ಬಿ.ಉಮೇಶ್, ಪಂಡಿತ್ ಜವಾಹರ್, ನಟರಾಜಪ್ಪ, ಕಲ್ಪನಾ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-17-74210057

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.