ಮಧುಗಿರಿ: ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಜನ ಸಾಮಾನ್ಯರು ಒಬ್ಬಂಟಿಯಾಗಿ ಸಂಚಾರ ಮಾಡುವುದು ಕಷ್ಟವಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಐದರಿಂದ ಹತ್ತು ನಾಯಿಗಳ ಹಿಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ನಡೆಸುವ ವೃದ್ದರು, ಮಹಿಳೆಯರು ಮತ್ತು ಮಕ್ಕಳು ಹಾಗೂ ಬೈಕ್ ಸವಾರರ ಮೇಲೆ ದಾಳಿ ಮಾಡುತ್ತಿವೆ. ಎಷ್ಟೋ ಸಲ ದ್ವಿಚಕ್ರ ವಾಹನ ಸವಾರರು ನಾಯಿಗಳ ದಾಳಿಗೆ ಹೆದರಿ ರಸ್ತೆ ಮೇಲೆ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಉದಾಹರಣೆ ಇದೆ.
ಕಸದ ತೊಟ್ಟಿಗಳಲ್ಲಿ ಸಾರ್ವಜನಿಕರು ಹಾಕಿದ ಕಸವನ್ನು ರಸ್ತೆಗೆ ಎಳೆದು ತರುತ್ತಿವೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.