ತುಮಕೂರು: ನಗರದ ಗುಂಚಿ ವೃತ್ತದ ಬಳಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆವರಣದ ಗೋಡೆ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ.

ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 8 ಜನ ಮೃತಪಟ್ಟರು. ಸಾಧಾರಣ ಮಳೆಗೆ ಕುಸಿದ ಗೋಡೆ ಅಮಾಯಕರ ಜೀವಗಳನ್ನು ಬಲಿ ಪಡೆದಿತ್ತು. ಈ ಘಟನೆಯ ನಂತರವೂ ಜಿಲ್ಲೆಯ ಅಧಿಕಾರಿ ವರ್ಗ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಜಿಲ್ಲಾಧಿಕಾರಿ ಕಚೇರಿಯ ಅನತಿ ದೂರದಲ್ಲಿನ ಅವ್ಯವಸ್ಥೆ ಬಗ್ಗೆ ಯಾರೊಬ್ಬರೂ ಚಕಾರ ಎತ್ತುತ್ತಿಲ್ಲ. ಬೆಂಗಳೂರಿನ ಸ್ಥಿತಿ ಎದುರಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿಲ್ಲ.

ನಗರ ಪೊಲೀಸ್ ಠಾಣೆಗೆ ನಿತ್ಯ ಹತ್ತಾರು ಮಂದಿ ಭೇಟಿ ನೀಡುತ್ತಾರೆ. ಇಲ್ಲಿಗೆ ಬರುವ ಜನ ಬಿರುಕು ಬಿಟ್ಟ ಗೋಡೆ ನೆರಳಿನಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಪಾದಚಾರಿಗಳು ಗೋಡೆಗೆ ಹೊಂದಿಕೊಂಡಿರುವ ರಸ್ತೆಯಲ್ಲಿ ಓಡಾಡುತ್ತಾರೆ. ಒಂದು ಸಣ್ಣ ಮಳೆ ಸುರಿದರೂ ಗೋಡೆ ಕುಸಿದು, ಹೆಚ್ಚಿನ ಅನಾಹುತ ಸಂಭವಿಸಬಹುದು. ಆದರೆ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಗೋಡೆ ತೆರವುಗೊಳಿಸಲು ಕಾರ್ಯಪ್ರವೃತ್ತವಾಗಿಲ್ಲ.

ಗೋಡೆ ತೆರವು ಮಾಡಿ, ಸಾರ್ವಜನಿಕರ ಓಡಾಟಕ್ಕೆ ಮುಕ್ತ ಅವಕಾಶ ಕಲ್ಪಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಲೋಕೋಪಯೋಗಿ ಇಲಾಖೆಗೆ ಪತ್ರ ಬರೆಯಲಾಗಿದೆ. ಈ ಕುರಿತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಮನಕ್ಕೆ ತರಲಾಗಿದೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ತೆರವಿಗೆ ಸಂಬಂಧಿಸಿದಂತೆ ಒಂದು ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಈ ಕಾರ್ಯ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದೆ.

‘ಅನಾಹುತ ಸಂಭವಿಸಿದ ನಂತರ ನೊಂದವರಿಗೆ ಸಾಂತ್ವನ ಹೇಳುವ ಬದಲು, ಅಹಿತಕರ ಘಟನೆ ನಡೆಯುವುದನ್ನು ತಡೆಯಬೇಕು. ಗೋಡೆಗೆ ಹೊಂದಿಕೊಂಡಿರುವ ರಸ್ತೆಯಲ್ಲಿಯೇ ಶಾಸಕ ಕೆ.ಎನ್.ರಾಜಣ್ಣ ಸೇರಿದಂತೆ ಹಲವು ಜನಪ್ರತಿನಿಧಿಗಳು ಸಂಚರಿಸುತ್ತಾರೆ. ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಇದನ್ನು ಒಳಗೊಂಡಂತೆ ಸಾರ್ವಜನಿಕ ಸ್ಥಳಗಳಲ್ಲಿ ಶಿಥಿಲಾವಸ್ಥೆಗೆ ತಲುಪಿದ ಗೋಡೆಗಳನ್ನು ನೆಲಸಮಗೊಳಿಸಬೇಕು’ ಎಂದು ಶ್ರೀರಾಮನಗರದ ಶಂಕರಮೂರ್ತಿ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-17-114348518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.