ತುಮಕೂರು: ಅರಣ್ಯ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ, ನಕಲಿ ನೇಮಕಾತಿ ಪತ್ರ ವಿತರಿಸಿ, ತರಬೇತಿ ನೀಡಿ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನೆಲಮಂಗಲ ತಾಲ್ಲೂಕು ಭಾರತಿಪುರ ಗ್ರಾಮದ ಬಿ.ಎಸ್.ಕಿರಣ್, ತುಮಕೂರು ಹೊರವಲಯದ ಬೆಳಗುಂಬ ಬಳಿಯ ‘ನಮಸ್ತೆ ಕೆಫೆ’ ಮಾಲೀಕ ಪವನ್, ಬೆಳಗುಂಬದ ಉದಯ್, ವಡ್ಡಗೆರೆ ಶರಣ್ ಎಂಬುವರನ್ನು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತಾಲ್ಲೂಕಿನ ವಡ್ಡರಹಳ್ಳಿಯಲ್ಲಿರುವ ಕಾಂಗ್ರೆಸ್ ಮುಖಂಡ ವಾಲೇ ಚಂದ್ರಯ್ಯ ತೋಟದ ಶೆಡ್ನಲ್ಲಿ ಆರೋಪಿಗಳು ತರಬೇತಿ ಕೇಂದ್ರ ಪ್ರಾರಂಭಿಸಿದ್ದರು. ಅರಣ್ಯ ಇಲಾಖೆ ಹೆಸರಿನಲ್ಲಿ ಯುವಕರಿಗೆ ತರಬೇತಿ ನೀಡುತ್ತಿದ್ದರು. ಮಾರ್ಚ್ 26ರಂದು ಬೆಳಗಿನ ಜಾವ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ್ದರು.

ವಲಯ ಅರಣ್ಯಾಧಿಕಾರಿ ನಮಿತಾ ನೀಡಿದ ದೂರಿನ ಮೇರೆಗೆ ಕಿರಣ್, ಪವನ್, ಉದಯ್ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಂತರ ತಲೆಮರೆಸಿಕೊಂಡಿದ್ದರು. ಪತ್ತೆಗೆ 5 ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣ ದಾಖಲಾದ ಐದು ದಿನಗಳ ನಂತರ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

‘ಪ್ರಕರಣದಲ್ಲಿ ಪವನ್ ಪಾತ್ರ ಇರುವುದು ಕಂಡು ಬಂದಿಲ್ಲ. ಹೋಟೆಲ್ನಿಂದ ಊಟ ತಂದು ಕೊಡಲು ಆತನನ್ನು ಬಳಸಿಕೊಂಡಿದ್ದರು. ಶರಣ್, ಯುವಕರನ್ನು ಕರೆದುಕೊಂಡು ಬಂದಿದ್ದರು. ವಿಚಾರಣೆ ನಂತರ ಮತ್ತಷ್ಟು ವಿವರಗಳು ಸಿಗಲಿವೆ’ ಎಂದು ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-17-37297755

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.