ತುಮಕೂರು: ಸರ್ಕಾರ ಪುಸ್ತಕ ಖರೀದಿಸಿ ನಾಲ್ಕು ವರ್ಷಗಳಾಗಿವೆ. ಯಾವ ಸರ್ಕಾರಗಳೂ ಸಾಹಿತ್ಯವನ್ನು ಪ್ರೋತ್ಸಾಹಿಸುತ್ತಿಲ್ಲ. ಈಗಿನ ರಾಜಕಾರಣಿಗಳಿಗೆ ಸಾಹಿತ್ಯ, ಸಂಸ್ಕೃತಿ ಬೇಕಾಗಿಲ್ಲ ಎಂದು ಸಾಹಿತಿ ಕರೀಗೌಡ ಬೀಚನಹಳ್ಳಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಿದ್ದ ಸಂಸ್ಥಾಪನಾ ದಿನಾಚರಣೆ, ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಹಿಂದೆ ರಾಜಾಶ್ರಯದಲ್ಲಿ ಸಾಹಿತ್ಯ ರಚನೆ ಆಗುತ್ತಿತ್ತು. ರಾಜ, ಮಹಾರಾಜರು ಸಾಹಿತ್ಯ, ಸಾಹಿತಿಗಳನ್ನು ಪ್ರೋತ್ಸಾಹಿಸುತ್ತಿದ್ದರು. ಈಗ ಅಂತಹ ಪ್ರೋತ್ಸಾಹ ಸಿಗುತ್ತಿಲ್ಲ. ಶಾಲಾ– ಕಾಲೇಜು ಮಕ್ಕಳು ಪುಸ್ತಕ ಓದಬೇಕು. ಪುಸ್ತಕದ ಜ್ಞಾನ ಮೊಬೈಲ್ನಲ್ಲಿ ಸಿಗುವುದಿಲ್ಲ ಎಂದರು.

ಸಾಹಿತ್ಯ, ಸಂಸ್ಕೃತಿ ಬೆಳೆಸಲು ಮೈಸೂರು ಮಹಾರಾಜರು 112 ವರ್ಷಗಳ ಹಿಂದೆ ಸಾಹಿತ್ಯ ಪರಿಷತ್ತು ಸ್ಥಾಪಿಸಿದರು. ಇಂದಿನ ತನಕ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳೆಸುವ ಚಟುವಟಿಕೆ ನಡೆಸಿಕೊಂಡು ಬರಲಾಗುತ್ತಿದೆ. ಸರ್ಕಾರ, ದಾನಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಸರ್ಕಾರ, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರಿಷತ್ತಿಗೆ ಸಹಾಯ ಮಾಡುತ್ತಿದ್ದಾರೆ. ಬೇಡುವ ಕೈ ಶುದ್ಧವಾಗಿದ್ದರೆ ಕೊಡುವ ಕೈಗಳಿಗೆ ಕೊರತೆಯಿಲ್ಲ’ ಎಂದರು.

ಸುಶೀಲಾ ಸದಾಶಿವಯ್ಯ ಅವರಿಗೆ ಭಾಗೀರಥಮ್ಮ ದತ್ತಿ ಪ್ರಶಸ್ತಿ, ಪ.ನಾ.ಹಳ್ಳಿ ಹರೀಶ್ಗೆ ಶಾಂಪುರ ಭಾಗೀರಥಮ್ಮ ನೆನಪಿನ ಪ್ರಶಸ್ತಿ, ಕೆ.ಮಂಜೇಶ್ ಅವರಿಗೆ ದೇವಪ್ರಕಾಶ್ ಹಾಸ್ಯ ಪ್ರಶಸ್ತಿ, ಪತ್ರಿಕಾ ಛಾಯಾಗ್ರಾಹಕರಾದ ಟಿ.ಆರ್.ರೇಣುಕಾಪ್ರಸಾದ್, ಟಿ.ಎಚ್.ಸುರೇಶ್ ಅವರಿಗೆ ದೇವಪ್ರಕಾಶ್ ಮಾಧ್ಯಮ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಲೇಖಕಿ ಬಾ.ಹ.ರಮಾಕುಮಾರಿ, ಕೈಗಾರಿಕೋದ್ಯಮಿ ಎಚ್.ಜಿ.ಚಂದ್ರಶೇಖರ್, ಸರ್ವೋದಯ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಕೆ.ವಿ.ಸುಬ್ಬರಾವ್, ಇತಿಹಾಸಕಾರ ಡಿ.ಎನ್.ಯೋಗೀಶ್ವರಪ್ಪ, ಕಂಟಲಗೆರೆ ಸಣ್ಣಹೊನ್ನಯ್ಯ, ಎಂ.ಎಚ್.ನಾಗರಾಜು ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.