ತುಮಕೂರು: ಸಮಾಜ ಕಲ್ಯಾಣ ಇಲಾಖೆ ಪಾವಗಡ ಸಹಾಯಕ ನಿರ್ದೇಶಕರಾಗಿದ್ದ ಮಲ್ಲಿಕಾರ್ಜುನಯ್ಯ ತಮ್ಮ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರಂತ ಹಾಗೂ ಆಘಾತಕಾರಿಯಾಗಿದೆ ಎಂದು ಸಿಪಿಐಎಂ ಖಂಡಿಸಿದೆ.

ಮೇಲಧಿಕಾರಿಗಳ ಕಿರುಕುಳದಿಂದ ಪ್ರಾಣ ತೆತ್ತಿದ್ದಾರೆ. ನಿವೃತ್ತಿಗೆ ಕೆಲವೇ ದಿನಗಳ ಮುನ್ನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಸರ್ಕಾರಿ ಇಲಾಖೆಗಳಲ್ಲಿ ಆಳುತ್ತಿರುವ ಅಮಾನವೀಯ ವ್ಯವಸ್ಥೆ, ಭ್ರಷ್ಟಾಚಾರ, ಮೇಲಧಿಕಾರಿಗಳ ಅಹಂಕಾರ, ಕಿರುಕುಳಕ್ಕೆ ಕನ್ನಡಿ ಹಿಡಿಯುತ್ತದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ನಗರ ಕಾರ್ಯದರ್ಶಿ ಎ.ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾವಿಗೆ ಮುನ್ನ ಮಲ್ಲಿಕಾರ್ಜುನಯ್ಯ ಮಾಡಿರುವ ವಿಡಿಯೊದಲ್ಲಿ, ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ನೀಡುತ್ತಿದ್ದ ಕಿರುಕುಳದ ಬಗ್ಗೆ ಸ್ಪಷ್ಟವಾಗಿ ಆರೋಪಿಸಿದ್ದಾರೆ. ಇದನ್ನು ಗಮನಿಸಿದರೆ ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಯನ್ನು ಮಾನಸಿಕವಾಗಿ ದಮನಮಾಡಿ, ಅಂತಿಮ ಹಂತಕ್ಕೆ ತಳ್ಳಿರುವುದು ಗೊತ್ತಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-17-1570631280

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.