ತುಮಕೂರು: ನಗರದಲ್ಲಿ ಮೇ 20ರಂದು ನಡೆಯಲಿರುವ ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನಾ ಸಮಾವೇಶದಲ್ಲಿ ಭಾಗವಹಿಸುವ ಎಲ್ಲ ಫಲಾನುಭವಿಗಳಿಗೂ ಸ್ಥಳದಲ್ಲೇ ಸವಲತ್ತು ವಿತರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಜಿಲ್ಲಾ ಆಡಳಿತಕ್ಕೆ ಸೂಚಿಸಿದ್ದಾರೆ.

ನಗರದಲ್ಲಿ ಸೋಮವಾರ ಸಮಾವೇಶದ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವ ಸಮಾವೇಶದಲ್ಲಿ ಫಲಾನುಭವಿಗಳಿಗೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಸವಲತ್ತು ವಿತರಣೆ ಮಾಡಲಾಗುತ್ತದೆ. ಇನ್ನಿತರೆ ಫಲಾನುಭವಿಗಳಿಗೆ ಅಂದೇ ಸವಲತ್ತು, ಹಕ್ಕುಪತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಈ ಹಿಂದೆ ವೇದಿಕೆಯಲ್ಲಿ ಸಾಂಕೇತಿಕವಾಗಿ ಹಕ್ಕುಪತ್ರ ನೀಡಿದ ನಂತರ ಇತರೆ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ವಿಳಂಬವಾಗುವ ಸಾಧ್ಯತೆಗಳ ಬಗ್ಗೆ ಕೇಳಿದ್ದೇನೆ. ಹಾಗಾಗಿ ಈ ಬಾರಿ ಅಂತಹ ತಪ್ಪು ಮಾಡಬಾರದು. ಫಲಾನುಭವಿಗಳು ಕುಳಿತುಕೊಳ್ಳುವ ಸ್ಥಳದಲ್ಲೇ ನೀಡಬೇಕು ಎಂದು ನಿರ್ದೇಶಿಸಿದರು.

ನಗರಕ್ಕೆ ವಿವಿಧೆಡೆಗಳಿಂದ ಫಲಾನುಭವಿಗಳನ್ನು ಕರೆತರಲು ಸರ್ಕಾರಿ, ಖಾಸಗಿ ಸೇರಿದಂತೆ ಸುಮಾರು 3 ಸಾವಿರ ಬಸ್ಗಳನ್ನು ಬಳಸಿಕೊಳ್ಳಲಾಗುತ್ತದೆ. ಜನರು ದೂರದಿಂದ ಕಾರ್ಯಕ್ರಮದ ಜಾಗಕ್ಕೆ ನಡೆದುಕೊಂಡು ಬರಲು ಅವಕಾಶ ನೀಡದೆ, ಸ್ಥಳಕ್ಕೆ ಕರೆತಂದು ಬಿಡಬೇಕು. ನಿರ್ದಿಷ್ಟ ತಾಲ್ಲೂಕು ವಾಹನಗಳು ನಿರ್ದಿಷ್ಟ ಪ್ರದೇಶದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಎಸ್ಪಿ ಕೆ.ವಿ.ಅಶೋಕ್ ಇತರರು ಹಾಜರಾಗಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-17-2053911143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.