ತುಮಕೂರು: ಲಂಚ ಪಡೆದ ಆರೋಪದ ಮೇಲೆ ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗ ಶಾಲೆ ತಾಂತ್ರಿಕ ಅಧಿಕಾರಿ ಉಮಾದೇವಿ ಹಾಗೂ ಆರೋಗ್ಯ ಸುರಕ್ಷಾಧಿಕಾರಿ ಜಿ.ಎಲ್.ಧನಲಕ್ಷ್ಮಿ ಅವರನ್ನು ಅಮಾನತು ಮಾಡಲಾಗಿದೆ.

ಇಬ್ಬರು ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಚಂದ್ರಶೇಖರ್ ಆದೇಶಿಸಿದ್ದಾರೆ.

ಉಮಾದೇವಿ ಲಂಚ ಕೇಳಿರುವ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿತ್ತು. ಲಂಚದ ಹಣವನ್ನು ಫೋನ್ ಪೇ ಮೂಲಕ ಪಡೆದುಕೊಂಡಿದ್ದ ಆರೋಪ ಎದುರಿಸುತ್ತಿದ್ದರು. ಜಿ.ಎಲ್.ಧನಲಕ್ಷ್ಮಿ ವಿರುದ್ಧವೂ ಭ್ರಷ್ಟಾಚಾರ ಹಾಗೂ ಉಮಾದೇವಿ ಜತೆಗೆ ಹಣಕಾಸಿನ ವಿಚಾರದಲ್ಲಿ ಜಗಳವಾಡಿ ಬೀದಿ ರಂಪ ಮಾಡಿಕೊಂಡಿದ್ದ ಆರೋಪ ಕೇಳಿಬಂದಿತ್ತು.

ಉಮಾದೇವಿ, ಧನಲಕ್ಷ್ಮಿ ನಡುವಿನ ಹಣಕಾಸು ವ್ಯವಹಾರದಿಂದ ವೈಮನಸ್ಸು ಉಂಟಾಗಿದೆ. ಇದರಿಂದ ಇಬ್ಬರ ನಡುವೆ ಜಗಳ ನಡೆದಿರುವುದು ಮೇಲು ನೋಟಕ್ಕೆ ಕಂಡು ಬರುತ್ತದೆ. ಹಾಗಾಗಿ ಶಿಸ್ತುಕ್ರಮ ಕೈಗೊಳ್ಳುವಂತೆ ತಾಲ್ಲೂಕು ವೈದ್ಯಾಧಿಕಾರಿ ಶಿಫಾರಸು ಮಾಡಿದ್ದರು. ಈ ವರದಿ ಆಧಾರದ ಮೇಲೆ ಡಿಎಚ್ಒ ಶಿಸ್ತು ಕ್ರಮ ಕೈಗೊಂಡಿದ್ದಾರೆ.

ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯದರ್ಶಿ ಬಿ.ಎನ್.ಮಂಜುನಾಥ್ ದೂರು ಸಲ್ಲಿಸಿದ್ದರು. ಈ ದೂರಿನ ಮೇರೆಗೆ ವಿಚಾರ ನಡೆಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.