ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು | ಪ್ರತ್ಯೇಕ ಅಪಘಾತ: ಅಪರಿಚಿತ ವ್ಯಕ್ತಿ ಸೇರಿ ಮೂವರ ಸಾವು

Published 28 ಮೇ 2024, 15:27 IST
Last Updated 29 ಮೇ 2024, 5:02 IST
ಅಕ್ಷರ ಗಾತ್ರ

ಹಿರಿಯೂರು: ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಮತ್ತು ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಅಪರಿಚಿತ ವ್ಯಕ್ತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಯರಬಳ್ಳಿ ಸಮೀಪ ಮಂಗಳವಾರ ನಡೆದಿದೆ.

ತುಮಕೂರಿನ ವಿಶಾಲಾಕ್ಷಮ್ಮ (75) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬಳ್ಳಾರಿ ನಗರದ ನಾಗರಾಜ್ ಶೆಟ್ಟಿ (55) ಅವರನ್ನು ತುಮಕೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಬಿಂದು, ಭಾಗ್ಯಲಕ್ಷ್ಮಿ ಹಾಗೂ ಗೀತಾ ಅವರಿಗೆ ಗಂಭೀರ ಗಾಯಗಳಾಗಿದ್ದು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ತಾಲ್ಲೂಕಿನ ಆದಿವಾಲ ಸಮೀಪ ನಡೆದಿದೆ.

ಮೃತ ದೇಹದ ಮೇಲೆ ಹಲವು ವಾಹನಗಳು ಹಾದು ಹೋಗಿರುವ ಕಾರಣ ಗುರುತು ಪತ್ತೆಯಾಗಿಲ್ಲ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT