ತುಮಕೂರು: ಕೋಟ್ಯಂತರ ರೂಪಾಯಿ ವೆಚ್ಚದ ವಿದ್ಯಾರ್ಥಿ ನಿಲಯ, ಕಾಮಗಾರಿ ಮುಗಿದು ಐದು ವರ್ಷ ಕಳೆದರೂ ಉದ್ಘಾಟನೆಯ ಭಾಗ್ಯ ಕಂಡಿಲ್ಲ. ಆಡಳಿತ ವರ್ಗದ ನಿರ್ಲಕ್ಷ್ಯದಿಂದ ಇಡೀ ಕಟ್ಟಡ ಹಾಳು ಕೊಂಪೆಯಾಗಿ ಬದಲಾಗಿದೆ.

ನಗರ ಹೊರವಲಯದ ಬೆಳಗುಂಬ ರಸ್ತೆಯ ಸಿದ್ಧರಾಮೇಶ್ವರ ಬಡಾವಣೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯಿಂದ ಹಾಸ್ಟೆಲ್ ಕಟ್ಟಡ ನಿರ್ಮಾಣವಾಗಿದೆ. ಇದಕ್ಕೆ ಎಸ್ಸಿಎಸ್ಪಿ– ಟಿಎಸ್ಪಿ ಅನುದಾನದಲ್ಲಿ ₹1 ಕೋಟಿ ವ್ಯಯಿಸಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಬಳಕೆಗೆ ನೀಡಲು ಉದ್ದೇಶಿಸಲಾಗಿದೆ.

2013–14ನೇ ಸಾಲಿನಲ್ಲಿ ಮಂಜೂರಾತಿ ನೀಡಿದ್ದು, 2016ರಲ್ಲಿ ಭೂಮಿ ಪೂಜೆ ನೆರವೇರಿಸಲಾಗಿತ್ತು. ಆರು ವರ್ಷಗಳ ನಂತರ 2022ರಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಈವರೆಗೆ ಇಲ್ಲಿ ವಿದ್ಯಾರ್ಥಿಗಳು ಉಳಿದುಕೊಳ್ಳಲು ಸಾಧ್ಯವಾಗಿಲ್ಲ. ನಗರದ ರೈಲು ನಿಲ್ದಾಣ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಇಲ್ಲಿ ಪ್ರವೇಶ ಪಡೆಯಲು ಅವಕಾಶ ಇದೆ.

ಹಾಸ್ಟೆಲ್ ಆರಂಭವಾಗಿದ್ದರೆ ನೂರಾರು ವಿದ್ಯಾರ್ಥಿಗಳು ನೆರವು ಪಡೆಯುತ್ತಿದ್ದರು. ಹಾಸ್ಟೆಲ್ ಮುಂಭಾಗದಲ್ಲಿ ಗಿಡಗಂಟಿಗಳು ಬೆಳೆದಿವೆ. ಸ್ವಚ್ಛತೆ ಮರೀಚಿಕೆಯಾಗಿದೆ. ಉದ್ಘಾಟನೆಗೂ ಮುನ್ನವೇ ಬಿರುಕು ಬಿಟ್ಟಿದೆ. ಹಾಸ್ಟೆಲ್ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕಾಲೇಜು ಶಿಕ್ಷಣ ಇಲಾಖೆ ಮಧ್ಯೆ ಹಲವು ಬಾರಿ ಪತ್ರ ವ್ಯವಹಾರ ನಡೆದರೂ ಇದುವರೆಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಆಗಿಲ್ಲ.

ನಗರದ ಹೊರವಲಯದಲ್ಲಿ ಕಟ್ಟಡ ಇರುವುದರಿಂದ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಜನಪ್ರತಿನಿಧಿಗಳು ಮೌನ ವಹಿಸಿದ್ದಾರೆ. ಹೀಗಾಗಿ ಕಾಮಗಾರಿ ಪೂರ್ಣಗೊಂಡು ಹಲವು ವರ್ಷಗಳು ಕಳೆದರೂ ವಿದ್ಯಾರ್ಥಿಗಳ ಬಳಕೆಗೆ ನೀಡಲು ಸಾಧ್ಯವಾಗುತ್ತಿಲ್ಲ.

262 ಹಾಸ್ಟೆಲ್: ಜಿಲ್ಲೆಯಲ್ಲಿ ಪ್ರಸ್ತುತ ಒಟ್ಟು 262 ಹಾಸ್ಟೆಲ್ಗಳಿವೆ. ಸಮಾಜ ಕಲ್ಯಾಣ ಇಲಾಖೆಯ 104, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 119, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 21, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 16 ಹಾಸ್ಟೆಲ್ಗಳಿವೆ. ಒಟ್ಟು 25,455 ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.

ನಗರ ಪ್ರದೇಶದಲ್ಲಿ 58 ಹಾಸ್ಟೆಲ್ಗಳಲ್ಲಿ 10,554 ಮಕ್ಕಳಿದ್ದಾರೆ. ಆದರೂ ಹಾಸ್ಟೆಲ್ ಪ್ರವೇಶಕ್ಕೆ ಪ್ರತಿ ವರ್ಷ ಬೇಡಿಕೆ ಹೆಚ್ಚುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ಕಾಲೇಜು ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಹಾಸ್ಟೆಲ್ ಸಿಗದೆ ಪರದಾಡುತ್ತಿದ್ದಾರೆ. ಬಾಡಿಗೆ ರೂಮ್ ಮಾಡಿಕೊಂಡು ಕಾಲೇಜಿಗೆ ಹೋಗುತ್ತಿದ್ದಾರೆ. ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ನಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಮಯದಲ್ಲಿ ಸುಸಜ್ಜಿತವಾದ, ಅಗತ್ಯ ಸೌಲಭ್ಯ ಹೊಂದಿರುವ ಹಾಸ್ಟೆಲ್ ಕಟ್ಟಡ ಬಳಕೆ ಮಾಡಲು ಆಗುತ್ತಿಲ್ಲ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-17-598067517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.