ಸೋಮವಾರ, ಮೇ 17, 2021
30 °C

ಗೋಡಂಬಿ ಬೆಳೆಯಲು ಜಿಲ್ಲೆ ಪೂರಕ: ಮಾಧುಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ತುಮಕೂರು: ತುಮಕೂರು ಜಿಲ್ಲೆ ಗೋಡಂಬಿ ಬೆಳೆಗೆ ಪೂರಕವಾಗಿದೆ. ಹಾಗಾಗಿ ಇಲ್ಲಿನ ಜನರು ಕೇವಲ ತೆಂಗು ಬೆಳೆಗೆ ಮಾತ್ರ ಜೋತುಬೀಳದೆ, ಗೋಡಂಬಿ ಬೆಳೆ ಬೆಳೆಯಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ತೋಟಗಾರಿಕೆ ಇಲಾಖೆ ಆವರಣದಲ್ಲಿ ಶುಕ್ರವಾರ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಇಂದಿನ ಧಾವಂತ ಬದುಕಿನಲ್ಲಿ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಬದುಕಿನಲ್ಲಿ ರೂಢಿಸಿಕೊಂಡಾಗ ಮಾತ್ರ ನಾವು ಅಭಿವೃದ್ಧಿ ಹೊಂದಲು ಸಾಧ್ಯ. ಕೃಷಿಯ ಜತೆಗೆ ಎಲ್ಲಾ ಉಪಕಸುಬುಗಳನ್ನು ಮಾಡುವ ಮೂಲಕ ರೈತರು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳಬಹುದು’ ಎಂದರು.

ತುಮಕೂರು ಜಿಲ್ಲೆಯಲ್ಲಿ ಪುಷ್ಪ ಕೃಷಿಗೆ ಹೇರಳವಾದ ಅವಕಾಶವಿದ್ದು, ಜಿಲ್ಲೆಯ ಕೃಷಿಕರು ಇಂತಹ ಫಲಪುಷ್ಪ ಪ್ರದರ್ಶನವನ್ನು ನೋಡುವ ಮೂಲಕ ಇಲ್ಲಿ ಕೊಡುವ ಸಲಹೆ, ಮಾರ್ಗದರ್ಶನ ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಹೆಚ್ಚಿನ ಆದಾಯ ಗಳಿಸಬೇಕು. ನೀರಿನ ಮಿತ ಬಳಕೆಯ ಬಗ್ಗೆ ಗಮನ ಹರಿಸಿ ಹೂವು ತರಕಾರಿ ಮತ್ತು ಕೈತೋಟದ ಅಭಿವೃದ್ಧಿಗೆ ಕಾರ್ಯಪ್ರವೃತ್ತರಾಗಬೇಕು ಎಂದು ಕರೆ ನೀಡಿದರು.

ಮೇಯರ್ ಫರೀದಾ ಬೇಗಂ ಮಾತನಾಡಿ, ‘ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ರೈತರು ಮಾದರಿ ಕೃಷಿಯ ಬಗ್ಗೆ ಮಾಹಿತಿ ಪಡೆದು ಹೆಚ್ಚಿನ ಆದಾಯ ಗಳಿಸಬೇಕು’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು