ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಜಾನಕಲ್ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ರೈತರ ಬೆಳೆಗಳಿಗೆ ಅನುಕೂಲವಾಗುವಂತೆ ಶಾಶ್ವತ ನೀರಾವರಿ ಯೋಜನೆ ರೂಪಿಸುವುದಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಭರವಸೆ ನೀಡಿದರು.

ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ರಾಮಲಿಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ನಡೆದ ಮನೆ ಬಾಗಿಲಿಗೆ ಮನೆ ಮಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ರೈತರು ವಾಣಿಜ್ಯ ಬೆಳೆಗಳತ್ತ ಹೆಚ್ಚು ವಾಲುತ್ತಿದ್ದು ಅದರಲ್ಲಿಯೂ ಅಡಿಕೆ ಬೆಳೆಗೆ ಆಕರ್ಷಣೀಯವಾಗಿದ್ದಾರೆ. ಬೇಸಿಗೆ ಸಮಯದಲ್ಲಿ ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗುವುದರಿಂದ ಹೆಚ್ಚು ಸಂಕಷ್ಟ ಪಡುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ರೂಪಿಸಲಾಗುವುದು ಎಂದರು.

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬುಕ್ಕಾಪಟ್ಟಣ ಹೋಬಳಿಗೆ ಅನುದಾನದಲ್ಲಿ ಸಿಂಹ ಪಾಲು ನೀಡಲಾಗಿದೆ ಎಂದರು.

ತಾ.ಪಂ ಇಒ ಆರ್.ಹರೀಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಎಇಇಮಂಜು ಪ್ರಸಾದ್, ಪಿಡಿಒ ಮಾರಣ್ಣ, ಕಂದಾಯ ಅಧಿಕಾರಿ ಪವನ್, ಮುದ್ದು ಗಣೇಶ್, ಶಾಂತಕುಮಾರ್, ಸತ್ಯನಾರಾಯಣ, ನಾಗರಾಜು, ಜಗದೀಶ್ ಗೌಡ, ಗೋವಿಂದರಾಜು, ಲೋಕೇಶ್, ರಾಮಲಿಂಗಪುರ ಚಂದ್ರಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-17-546601170

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.