ತುಮಕೂರು: ಜಿಲ್ಲಾ ಮಟ್ಟದ ಜನತಾ ದರ್ಶನ ನಗರದ ಕೇಂದ್ರ ಗ್ರಂಥಾಲಯದಲ್ಲಿ ಬುಧವಾರ ನಡೆಯಲಿದ್ದು, ಅದಕ್ಕೂ ಮುನ್ನವೇ ಜಿಲ್ಲೆಯ ವಿವಿಧೆಡೆಗಳಿಂದ ಸುಮಾರು 2,500 ಅರ್ಜಿಗಳು ಸಲ್ಲಿಕೆಯಾಗಿವೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ.

ಕೆಲವು ತಾಲ್ಲೂಕುಗಳಲ್ಲಿ ಜನತಾ ದರ್ಶನ ಕಾರ್ಯಕ್ರಮವ ನಡೆಸಿ ಅರ್ಜಿ ಸ್ವೀಕರಿಸಲಾಗಿದೆ. ಮತ್ತೆ ಕೆಲವರು ನೇರವಾಗಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲ ತಾಲ್ಲೂಕುಗಳಿಂದ ಸುಮಾರು 2,500 ಅರ್ಜಿಗಳು ಬಂದಿದ್ದು, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಅಧಿಕಾರಿಗಳಿಗೆ ವಹಿಸಿದಜವಾಬ್ದಾರಿಯನ್ನು ಲೋಪವಿಲ್ಲದೆ ನಿರ್ವಹಿಸುವಂತೆ ಜಿಲ್ಲಾ ಆಡಳಿತ ನಿರ್ದೇಶಿಸಿದೆ.

ಗ್ರಂಥಾಲಯದ ಆವರಣದಲ್ಲಿ 10 ವಿವಿಧ ಪ್ರಮುಖ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುತ್ತದೆ. ಸಂಬಂಧಿಸಿದ ಇಲಾಖೆ ಮುಖ್ಯಸ್ಥರು ಸ್ಥಳದಲ್ಲಿ ಹಾಜರಿದ್ದು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.

ಕಾರ್ಯಕ್ರಮದ ಸ್ಥಳದಲ್ಲಿ ನಿರ್ಮಿಸಲಾಗುವ ತಾತ್ಕಾಲಿಕ ಮಳಿಗೆಗಳಲ್ಲಿ ಐಪಿಜಿಆರ್ಎಸ್ ತಂತ್ರಾಂಶ ಒಳಗೊಂಡ ಡಾಟಾ ಎಂಟ್ರಿ, ಕಂಪ್ಯೂಟರ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದ ಜನತಾ ದರ್ಶನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ಆಯೋಜಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಗಿದೆ. ಹಲವಾರು ವರ್ಷಗಳಿಂದ ಪರಿಹಾರ ಕಾಣದ ಜಟಿಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗಿದೆ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-17-1537996383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.