ತುಮಕೂರು: ನಗರ ವೀರಶೈವ ಸಮಾಜ ಸೇವಾ ಸಮಿತಿಯಿಂದ ಏ.29 ಮತ್ತು 30ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರೇಣುಕಾಚಾರ್ಯ, ಬಸವೇಶ್ವರ ಮತ್ತು ಸಿದ್ಧರಾಮೇಶ್ವರ ಜಯಂತ್ಯುತ್ಸವ, ವೀರಶೈವ ಧರ್ಮ ಸಮ್ಮೇಳನ ಏರ್ಪಡಿಸಲಾಗಿದೆ.

‘29ರಂದು ಸಂಜೆ 6 ಗಂಟೆಗೆ ಧರ್ಮ ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಎಲ್.ರೇವಣಸಿದ್ದಯ್ಯ ಉದ್ಘಾಟಿಸಲಿದ್ದಾರೆ. ಲೇಖಕಿ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಉಪನ್ಯಾಸ ನೀಡಲಿದ್ದಾರೆ. ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇತರರು ಭಾಗವಹಿಸಲಿದ್ದಾರೆ’ ಎಂದು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಎಸ್.ಜಿ.ಚಂದ್ರಮೌಳಿ ಇಲ್ಲಿ ಭಾನುವಾರ ಹೇಳಿದರು.

‘ವೇದಿಕೆ ಕಾರ್ಯಕ್ರಮದ ನಂತರ ‘ಅಭಿನವ ಬಸವೇಶ್ವರ’ ನೃತ್ಯ ರೂಪಕ ಪ್ರದರ್ಶಿಸಲಾಗುತ್ತದೆ. ಏ. 28ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ, ವೀರಶೈವ ಉಚಿತ ವೈದ್ಯಕೀಯ ಸೇವಾ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಏ. 30ರಂದು ಮಧ್ಯಾಹ್ನ 3.30 ಗಂಟೆಗೆ ರೇಣುಕಾಚಾರ್ಯ, ಬಸವೇಶ್ವರ ಮತ್ತು ಸಿದ್ಧರಾಮೇಶ್ವರ ಜಂಟಿ ಉತ್ಸವ ನಡೆಯಲಿದೆ. ಅರಳೇಪೇಟೆ ಬಸವೇಶ್ವರಸ್ವಾಮಿ ದೇವಾಲಯದ ಬಳಿ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕರಿಬಸವ ಮಠದ ಚನ್ನಬಸವ ರಾಜೇಂದ್ರ ಸ್ವಾಮೀಜಿ, ಚಿಕ್ಕತೊಟ್ಲುಕೆರೆ ಮಠದ ಅಟವಿ ಶಿವಲಿಂಗ ಸ್ವಾಮೀಜಿ, ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದರು.

ಮುಖಂಡರಾದ ಕೋರಿ ಮಂಜುನಾಥ್, ಟಿ.ಸಿ.ಓಹಿಲೇಶ್ವರ್, ಕೆ.ವೈ.ಸಿದ್ಧಲಿಂಗಮೂರ್ತಿ, ಮಲ್ಲಿಕಾರ್ಜುನಯ್ಯ, ಬಿ.ಎಸ್.ಮಂಜುನಾಥ್, ಟಿ.ವಿ.ಹರೀಶ್, ಡಿ.ಜೆ.ಶಶಿಧರನ್, ಜಿ.ಕೆ.ಸ್ವಾಮಿ, ಟಿ.ಆರ್.ನಟರಾಜು, ಆರ್.ಪ್ರಭು, ಮಹೇಶ್ ಬಾಬು, ವಿನಯ್, ಉಮೇಶ್, ಕುಮಾರಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.