ತುಮಕೂರು: ವಕೀಲ ರಮೇಶ್ ನಾಯ್ಕ್ ಅವರನ್ನು ಬಾಲನ್ಯಾಯ ಮಂಡಳಿ ಸದಸ್ಯ ಸ್ಥಾನದಿಂದ ಅಮಾನತು ಮಾಡಿ ಸರ್ಕಾರ ಬುಧವಾರ ಆದೇಶಿಸಿದೆ.

ರಮೇಶ್ ನಾಯ್ಕ್ ಅವರನ್ನು ಬಾಲನ್ಯಾಯ ಮಂಡಳಿಗೆ ಸಾಮಾಜಿಕ ಕಾರ್ಯಕರ್ತ ಸದಸ್ಯರನ್ನಾಗಿ ಮೂರು ವರ್ಷದ ಅವಧಿಗೆ ನೇಮಿಸಲಾಗಿತ್ತು. ‘ಕಾರ್ಯ ನಿರ್ವಹಣೆಯಲ್ಲಿ ವಿಫಲವಾಗಿರುವ ಕಾರಣ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ ಅನ್ವಯ ಅಮಾನತು ಪಡಿಸಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

‘ತಾವು ನ್ಯಾಯಾಧೀಶರೆಂದು ಎಲ್ಲ ಕಡೆ ಹೇಳಿಕೊಂಡು ಬಂದಿದ್ದಾರೆ. ಇವರ ವಿರುದ್ಧ ವಿರುದ್ಧ ಸೂಕ್ತ ಕ್ರಮ ಜರುಗಿಸಿ, ಅಮಾನುತುಗೊಳಿಸವಂತೆ’ ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ರಮೇಶ್ ನಾಯ್ಕ್ ಅವರನ್ನು ಅಮಾನತು ಮಾಡಲಾಗಿದೆ.

‘14 ವರ್ಷದ ಹಿಂದೆ ರಮೇಶ್ ನಾಯ್ಕ್ ವಿಜಯನಗರ ಜಿಲ್ಲೆಯ ಅನ್ನಪೂರ್ಣ ಎಂಬುವರನ್ನು ವಿವಾಹವಾಗಿದ್ದರು. ಮದುವೆ ನಂತರ ಪತ್ನಿಗೆ ರಮೇಶ್ ನಾಯ್ಕ್, ತಾಯಿ, ಅಕ್ಕ–ತಂಗಿಯವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು. ಅವರನ್ನು ಮನೆಯಲ್ಲಿ ಕೂಡಿ ಹಾಕಿದ್ದರಿಂದ ಮಾನಸಿಕ ಅಸ್ವಸ್ಥರಾಗಿದ್ದರು. ಈ ಕುರಿತು ಅನ್ನಪೂರ್ಣ ತಂದೆ ದೇವೇಂದ್ರ ನಾಯ್ಕ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರು’ ಎಂದು ವರದಿಯಲ್ಲಿ ತಿಳಿಸಲಾಗಿದೆ.

‘ವಿಚಾರಣೆಗೆ ಬರುವಂತೆ ಪ್ರಾಧಿಕಾರದಿಂದ ಜಾರಿ ಮಾಡಿದ ನೋಟಿಸ್ ರಮೇಶ್ ನಾಯ್ಕ್ ಸ್ವೀಕರಿಸಿಲ್ಲ. ಅನ್ನಪೂರ್ಣ ಅವರ ರಕ್ಷಣೆಗೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮುಂದಾಗಿದ್ದರು. ಈ ಸಮಯದಲ್ಲೂ ‘ನಾನು ಹೈಕೋರ್ಟ್ ನ್ಯಾಯಾಧೀಶ, ಬಾಲನ್ಯಾಯ ಮಂಡಳಿ ನ್ಯಾಯಾಧೀಶ, ನನ್ನನ್ನು ಯಾರೂ, ಏನೂ ಮಾಡಲು ಸಾಧ್ಯವಿಲ್ಲ’ ಎಂದು ರಮೇಶ್ ನಾಯ್ಕ್ ಗಲಾಟೆ ಮಾಡಿದ್ದರು. ಈ ಕುರಿತು ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ವಿಷಯವನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಗಮನಕ್ಕೂ ತರಲಾಗಿದೆ’ ಎಂದು ವಿವರಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-17-223953275

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.