ತುಮಕೂರು: ವಿಳಂಬ ಮಾಡದೆ, ಸಕಾಲದಲ್ಲಿ ಕಾಡುಗೊಲ್ಲ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ವಿತರಿಸಲು ಕ್ರಮ ವಹಿಸುವಂತೆ ರಾಜ್ಯ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ ಅವರು ಜಿಲ್ಲಾಧಿಕಾರಿಗೆ ನಿರ್ದೇಶಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕಾಡುಗೊಲ್ಲರು ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯವಾಗಿದೆ. ಸರ್ಕಾರದ ಸವಲತ್ತುಗಳು ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ. ಸೌಲಭ್ಯ ಪಡೆದುಕೊಳ್ಳುವಷ್ಟು ಪರಿಜ್ಞಾನವಿಲ್ಲ. ನಿಗಮದ ಮೂಲಕ ವಿವಿಧ ಯೋಜನೆ ಜಾರಿಗೊಳಿಸಲಾಗುತ್ತಿದೆ. ಆದರೆ ಸೌಲಭ್ಯ ಪಡೆದುಕೊಳ್ಳಲು ಜಾತಿ ಪ್ರಮಾಣ ಪತ್ರ ಸಕಾಲಕ್ಕೆ ಸಿಗುತ್ತಿಲ್ಲ. ಇದರಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ತಕ್ಷಣ ಕ್ರಮ ವಹಿಸಬೇಕು ಎಂದು ಹೇಳಿದರು.

ತುಮಕೂರು, ಚಿತ್ರದುರ್ಗ ಜಿಲ್ಲೆಯಲ್ಲಿ ಕಾಡು ಗೊಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಮಾಹಿತಿ ಕೊರತೆ, ಜಾತಿ ಪ್ರಮಾಣ ಪತ್ರ ಇಲ್ಲದೆ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುತ್ತಿಲ್ಲ. ಅಧಿಕಾರಿಗಳು ಇದನ್ನು ಗಮನಿಸಬೇಕು. ಸರ್ಕಾರವೂ ಸಹ ಈಗಾಗಲೇ ಸುತ್ತೋಲೆಹೊರಡಿಸಿದೆ. ಇದಕ್ಕೆ ತಹಶೀಲ್ದಾರ್ ಒತ್ತು ನೀಡಬೇಕು. ಜಿಲ್ಲಾಧಿಕಾರಿ ಗಮನಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ಗಂಗಾ ಕಲ್ಯಾಣ, ನೇರ ಸಾಲ, ಸಾರಥಿ ಯೋಜನೆಯಡಿ ವಾಹನ ಸೌಲಭ್ಯ, ಅರಿವು ಶೈಕ್ಷಣಿಕ ಯೋಜನೆ, ವಿದೇಶಿ ವ್ಯಾಸಂಗಕ್ಕೆ ಸಾಲ, ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸವಲತ್ತು ನೀಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಎಲ್ಲ ತಾಲ್ಲೂಕುಗಳ ತಹಶೀಲ್ದಾರ್ ಜಾತಿ ಪ್ರಮಾಣ ಪತ್ರ ವಿತರಿಸಲು ಗಮನಹರಿಸಬೇಕು. ತಳ ಸಮುದಾಯಗಳ ಜನ ಮೇಲೆ ಬರಬೇಕಾದರೆ ಅವರಿಗೆ ಸರ್ಕಾರದ ಯೋಜನೆಗಳು ತ್ವರಿತವಾಗಿ ತಲುಪಬೇಕು’ ಎಂದು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-17-1913537613

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.