ತುಮಕೂರು: ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ವತಿಯಿಂದ ನಗರದಲ್ಲಿ ಶನಿವಾರ ಕರೆದಿದ್ದ ಪತ್ರಿಕಾಗೋಷ್ಠಿ ಪೊಲೀಸ್ ಸರ್ಪಗಾವಲಿನಲ್ಲಿ ನಡೆಯಿತು.

ಗೃಹ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ವಿರುದ್ಧ ಸುದ್ದಿಗೋಷ್ಠಿ ಕರೆಯಲಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪತ್ರಿಕಾ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಅವರನ್ನು ತಡೆದು ಮನವೊಲಿಸಿ ವಾಪಸ್ ಕಳುಹಿಸಿದರು.

ಭವನದ ಮುಂಭಾಗ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಗರ ಡಿವೈಎಸ್ಪಿ ಕೆ.ಆರ್.ಚಂದ್ರಶೇಖರ್ ನೇತೃತ್ವದಲ್ಲಿ ನಗರ ಠಾಣೆ ಸಿಪಿಐ ಅವಿನಾಶ್ ಸೇರಿ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಸುದ್ದಿಗೋಷ್ಠಿ ಮುಗಿಯುವ ತನಕ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.

ನಗರದಲ್ಲಿ ಈಚೆಗೆ ಪರಮೇಶ್ವರ ಅಧ್ಯಕ್ಷತೆಯಲ್ಲಿ ನಡೆದ ಜನತಾ ದರ್ಶನದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಕೆಆರ್ಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಸೋಮಸುಂದರ್ ಅವರನ್ನು ಪೊಲೀಸರು ಬಂಧಿಸಿದ್ದರು. ಕೆಆರ್ಎಸ್ ಗೌರವಾಧ್ಯಕ್ಷ ರವಿಕೃಷ್ಣಾರೆಡ್ಡಿ ಇದನ್ನು ಖಂಡಿಸಿದ್ದರು. ‘ಪರಮೇಶ್ವರ ಅಸಮರ್ಥ ಮಂತ್ರಿ’ ಎಂದು ಟೀಕಿಸಿದ್ದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಪರಮೇಶ್ವರ, ‘ಕೆಆರ್ಎಸ್ ಪಕ್ಷದವರಿಗೆ ಮಾಹಿತಿ ಕೊರತೆ ಇದೆ. ಸರ್ಕಾರಿ ಕಾಲೇಜು ತರುವ ಉದ್ದೇಶದಿಂದ ಜಿಲ್ಲಾ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲಾಗುತ್ತಿದೆ’ ಎಂದು ಉತ್ತರ ನೀಡಿದ್ದರು.

ಇದಕ್ಕೆ ಪ್ರತಿಯಾಗಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಕೆಆರ್ಎಸ್ ಪದಾಧಿಕಾರಿಗಳು ‘ಬಹಿರಂಗ ಚರ್ಚೆಗೆ ಬರುವಂತೆ’ ಸಚಿವ ಪರಮೇಶ್ವರಗೆ ಸವಾಲು ಹಾಕಿದರು. ಪೊಲೀಸರ ಸರ್ಪಗಾವಲಿನಲ್ಲಿ ಮಾತನಾಡಬೇಕಾದ ಪರಿಸ್ಥಿತಿ ಉದ್ಭವಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಅಸಮಾಧಾನ ತೋಡಿಕೊಂಡರು.

‘ಜಿಲ್ಲೆಯ ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ. ಸಚಿವರು ದಿನಾಂಕ ನಿಗದಿ ಮಾಡಲಿ’ ಎಂದು ಕೆಆರ್ಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎನ್.ದೀಪಕ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೆಆರ್ಎಸ್ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಭಟ್ಟರಹಳ್ಳಿ, ‘ಗುಬ್ಬಿ ವೀರಣ್ಣ ಕಲಾ ಕ್ಷೇತ್ರ ಅಥವಾ ಟೌನ್ಹಾಲ್ ವೃತ್ತದಲ್ಲಿ ಬಹಿರಂಗ ಚರ್ಚೆ ಮಾಡಲು ನಾವು ಸಿದ್ಧರಿದ್ದೇವೆ. ಪರಮೇಶ್ವರ ಅವರು ಜಿಲ್ಲೆಯ ಅಭಿವೃದ್ಧಿಯ ಕಿರುಹೊತ್ತಿಗೆ ತರಲಿ. ನಾವು ವಿವಿಧ ಕಾಮಗಾರಿಗಳ ಕುರಿತು ದಾಖಲೆ ಸಮೇತ ವಿಷಯ ಮಂಡಿಸುತ್ತೇವೆ’ ಎಂದರು.

ಕೆಆರ್ಎಸ್ ಪದಾಧಿಕಾರಿಗಳಾದ ಸೋಮಸುಂದರ್, ರವಿಕುಮಾರ್, ನರಸಿಂಹರಾಜು, ಪ್ರದೀಪ್ಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-17-623247783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.