ತುಮಕೂರು: ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಮೇ 19ರಂದು ನಗರದ ಟೌನ್ಹಾಲ್ ಬಳಿ ಪ್ರತಿಭಟನೆ ನಡೆಸಿ, ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯ ಭಾಸ್ಕರ್ ಇಲ್ಲಿ ಶನಿವಾರ ಹೇಳಿದರು.

ಮೇ 20ರಂದು ನಡೆಯಬೇಕಿದ್ದ ಸರ್ಕಾರದ 3 ವರ್ಷದ ಸಾಧನಾ ಸಮಾವೇಶವನ್ನು ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೆದರಿ 19ಕ್ಕೆ ನಿಗದಿಪಡಿಸಲಾಗಿದೆ. ಸರ್ಕಾರದ ಕುತಂತ್ರ ಖಂಡಿಸಿ ಅದೇ ದಿನ ‘ನಿಮ್ಮ ಸಂಭ್ರಮಕ್ಕೆ ನಮ್ಮ ಕಣ್ಣೀರಿನ ಧಿಕ್ಕಾರ’ ಎಂದು ಪ್ರತಿಭಟನೆ ನಡೆಸಲಾಗುವುದು. ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರ ಸಾರಿಗೆ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ ನಿಲ್ಲಿಸುವುದಿಲ್ಲ. ಕಾರ್ಮಿಕರ ಕಣ್ಣೀರು ಒರೆಸದೆ ಸಾಧನಾ ಸಮಾವೇಶ ಮಾಡಲಾಗುತ್ತಿದೆ. 4 ಸಾವಿರ ಬಸ್ ಕಾಯ್ದಿರಿಸಿದ್ದು, ನಾವು ಸಮಾವೇಶಕ್ಕೆ ಅಡ್ಡಿ ಪಡಿಸುವುದಿಲ್ಲ ಎಂದರು.

ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷೆ ಜ್ಯೋತಿ ಅನಂತಸುಬ್ಬರಾವ್, ‘ವೇತನ ಹೆಚ್ಚಳ ಮಾಡುವುದು ಸರ್ಕಾರದ ಕರ್ತವ್ಯ. ಈ ಕುರಿತು ಕಳೆದ ಎರಡೂವರೆ ವರ್ಷದಿಂದ ಸರ್ಕಾರದ ಜತೆಗೆ ಮಾತುಕತೆ ನಡೆಯುತ್ತಿದೆ. ಮುಖ್ಯಮಂತ್ರಿ, ಸಚಿವರ ಗಮನಕ್ಕೂ ತರಲಾಗಿದೆ. ಕಾರ್ಮಿಕರ ಪರವಾದ ನಿರ್ಧಾರ ತೆಗೆದುಕೊಳ್ಳಲು ಆಗಿಲ್ಲ. ಸರ್ಕಾರದ ನಿಜವಾದ ಸಾಧನೆ ಏನು ಎಂಬುವುದನ್ನು ಜನರಿಗೆ ತಿಳಿಸಲು ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಮುಷ್ಕರದಿಂದ ಸಾಮಾನ್ಯರಿಗೆ ತೊಂದರೆ ಕೊಡುವ ಉದ್ದೇಶವಿಲ್ಲ. ನಮ್ಮ ಮುಂದೆ ಪರ್ಯಾಯ ಆಯ್ಕೆಗಳಿಲ್ಲ. ಎಸ್ಮಾ ಜಾರಿ ಮಾಡಿದರೂ ಮುಷ್ಕರ ಮುಂದುವರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮುಖಂಡರಾದ ಎಚ್.ಡಿ.ರೇವಪ್ಪ, ಗಿರೀಶ್, ಎನ್.ಕೆ.ಸುಬ್ರಮಣ್ಯ, ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-17-1593426051

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.