ತುಮಕೂರು: ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಕರೆಗೆ ಬೆದರಿದ ರಾಜ್ಯ ಸರ್ಕಾರ, ತನ್ನ ಸಾಧನಾ ಸಮಾವೇಶದ ದಿನಾಂಕವನ್ನೇ ಹಿಂದೂಡಿದೆ.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಮೇ 20ರಂದು ನಡೆಸಲು ಉದ್ದೇಶಿಸಿದ್ದ ಸಮಾವೇಶವನ್ನು ಈಗ ಮೇ 19ರಂದೇ ನಡೆಸಲು ನಿರ್ಧರಿಸಲಾಗಿದೆ.

‘ಸಾರಿಗೆ ನೌಕರರ ಮುಷ್ಕರದಿಂದ ಸಮಾವೇಶಕ್ಕೆ ಅಡ್ಡಿ ಆಗಬಾರದು ಎಂದು ಒಂದು ದಿನ ಮುಂಚಿತವಾಗಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನದಂತೆ ಬದಲಾವಣೆ ಮಾಡಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ತುಂಬಿದ್ದು, ಮೇ 20ರಂದು ಸಾಧನಾ ಸಮಾವೇಶಏರ್ಪಡಿಸಿತ್ತು.

ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ವಿವಿಧ ಯೋಜನೆಗಳ ಫಲಾನುಭವಿಗಳ ನ್ನು ಕರೆತರಲು 2,500ಕ್ಕೂ ಹೆಚ್ಚು ಬಸ್ಗಳನ್ನು ಬಳಸಲು ಉದ್ದೇಶಿಸ ಲಾಗಿದೆ. ಮುಷ್ಕರ ಆರಂಭವಾದರೆ ಸಮಾವೇಶಕ್ಕೆ ಜನರು ಬರಲು ಸಾಧ್ಯವಾಗುವುದಿಲ್ಲ. ಮುನ್ನೆಚ್ಚರಿಕೆ ವಹಿಸಿ ಒಂದು ದಿನ ಮೊದಲು ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಈಗ ಮುದ್ರಿಸಿರುವ ಆಹ್ವಾನ ಪತ್ರಿಕೆಗಳನ್ನೇ ನೀಡಿ ಮೇ 19ರಂದೇ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಲಾಗುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-1379476188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.