ಶಿರಾ: ತಾಲ್ಲೂಕಿನ ಅದಲೂರು ಬಳಿಯ ಕೂಡಲ ಸಂಗಮ ಬ್ಯಾರೇಜ್ಗೆ ತಕ್ಷಣ ಹೇಮಾವತಿ ನೀರು ಹರಿಸುವಂತೆ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಒತ್ತಾಯಿಸಿದ್ದಾರೆ.

ಗೌಡಗೆರೆ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಈ ವರ್ಷದ ಮೊದಲ ಆರು ತಿಂಗಳಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತ ಸಮುದಾಯದ ಕೃಷಿ ಚಟುವಟಿಕೆಗಳಲ್ಲಿ ತೀವ್ರ ಹಿನ್ನಡೆಯಾಗಿದೆ. ಅಂತರ್ಜಲ ಮಟ್ಟ ಕುಸಿದ ಕಾರಣ ಕುಡಿಯುವ ನೀರಿಗೆ ಕಷ್ಟವಾಗಿದೆ. ಇದರಿಂದಾಗಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಂಕಷ್ಟ ತಲೆದೋರಿದೆ. ತೋಟಗಳು ಒಣಗುತ್ತಿದ್ದು ಕೃಷಿ ಅವಲಂಬಿತ ಕುಟುಂಬಗಳು ಹೆಚ್ಚು ಸಂಕಷ್ಟಕ್ಕೆ ಸಿಲುಕಿ ರೈತ ಸಮುದಾಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಕೂಡಲ ಸಂಗಮ ಬ್ಯಾರೇಜ್ಗೆ ಹೇಮಾವತಿ ನೀರು ಹರಿಸಿದಲ್ಲಿ ಸುತ್ತಲಿನ ಗ್ರಾಮಗಳ ಭೂಗತ ಜಲಮಟ್ಟ ಸುಧಾರಣೆಯಾಗುವುದರ ಜೊತೆಗೆ ಕೊಳವೆಬಾವಿಗಳಲ್ಲಿ ನೀರಿನ ಲಭ್ಯತೆ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಕೂಡ ಬಹುಮಟ್ಟಿಗೆ ಪರಿಹಾರವಾಗಲಿದೆ. ತೋಟಗಾರಿಕೆ ಬೆಳೆಗಳಿಗೆ ಜೀವ ಬಂದಂತೆ ಆಗುವುದರ ಜೊತೆಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಗೂ ಪರಿಹಾರ ದೊರಕುವುದು.

ಶಾಸಕರು, ತಾಲ್ಲೂಕು ಆಡಳಿತ, ಸಣ್ಣ ನೀರಾವರಿ ಇಲಾಖೆ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ತಕ್ಷಣ ಮಧ್ಯಪ್ರವೇಶಿಸಿ, ಕೂಡಲ ಸಂಗಮ ಬ್ಯಾರೇಜ್ಗೆ ಹೇಮಾವತಿ ನೀರು ಹರಿಸುವ ಮೂಲಕ ಈ ಭಾಗದ ರೈತರು ಹಾಗೂ ಸಾರ್ವಜನಿಕರ ಹಿತ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-17-1386316783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.