ಪ್ರಜಾವಾಣಿವಾರ್ತೆ

ಕುಣಿಗಲ್: ಕಂದಾಯ ಇಲಾಖೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿಲ್ಲ. ಇದರಿಂದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಕೆಳಹಂತದ ಸಿಬ್ಬಂದಿ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಶಾಸಕ ಡಾ.ರಂಗನಾಥ್, ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ಅವರು ಗುರುವಾರ ಆಡಳಿತ ಸೌಧದ ಸಭಾಂಗಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ವಗರೆಗೆರೆ ಗ್ರಾಮದ ಹುಚ್ಚಮ್ಮ ಅವರ ಪತಿ ಮೃತಪಟ್ಟಿದ್ದಾರೆ. ಅವರು ಪತ್ನಿ ಹೆಸರಿಗೆ ಖಾತೆ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ, ಕಂದಾಯ ಇಲಾಖೆ ಅಧಿಕಾರಿಗಳು ಮೃತರ ಪತ್ನಿ ಎಂದು ದಾಖಲಿಸುವ ಬದಲು ಮಗಳು ಎಂದು ತಪ್ಪಾಗಿ ದಾಖಲಿಸಿದ್ದರು. ಈ ಎಡವಟ್ಟಿನಿಂದ ಹುಚ್ಚಮ್ಮ ಹೆಸರಿಗೆ ಖಾತೆ ಬದಲಾವಣೆಯಾಗಿಲ್ಲ. ಅವರು ಸಭೆಯಲ್ಲಿ ಶಾಸಕರಿಗೆ ಮನವಿ ಮಾಡಿದರು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಚೇರಿಗೆ ಅಲೆದಾಡಿದರೂ ಸಮಸ್ಯೆ ಬಗೆಹರಿಯಲಿಲ್ಲ ಎಂದು ಹುಚ್ಚಮ್ಮ ಬೇಸರ ವ್ಯಕ್ತಪಡಿಸಿದರು. ಆಗ ಶಾಸಕರು ಕೂಡಲೇ ಸ್ಥಳದಲ್ಲೇ ಖಾತೆ ಬದಲಾವಣೆ ಮಾಡಿಕೊಡಲು ಸೂಚಿಸಿದರು.

ಕಂದಾಯ ಗ್ರಾಮಗಳ ಘೋಷಣೆಗೆ ಅಗತ್ಯ ದಾಖಲೆ ಮತ್ತು ವರದಿ ನೀಡಬೇಕು. ಇದಕ್ಕಾಗಿ ಗ್ರಾಮ ಆಡಳಿತಾಧಿಕಾರಿ ಮತ್ತು ಪಿಡಿಒಗಳಿಗೆ ಸೂಚನೆ ನೀಡಲಾಯಿತು. ನಿಗಾ ವಹಿಸಬೇಕು ಎಂದು ತಹಶೀಲ್ದಾರ್ ಕರಿಯಾ ನಶಯಕ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್ ಅವರಿಗೆ ಶಾಸಕರು ಸೂಚನೆ ನೀಡಿದರು.

ಅಮೃತೂರು ರಾಜಸ್ವ ನಿರೀಕ್ಷಕ ರವಿಕುಮಾರ್ ವಿರುದ್ಧ ಗ್ರಾಮಸ್ಥರಿಂದ ಹೆಚ್ಚಾಗಿ ದೂರುಗಳು ಬಂದಿವೆ. ಅವರ ವಿರುದ್ಧ ಕ್ರಮ ತೆಗೆದುಕೊಂಡು ಬದಲಾವಣೆ ಮಾಡಬೇಕು ಎಂದು ಶಾಸಕರು ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ಕಿರಂಗೂರು ಗ್ರಾಮದ ಸ್ಮಶಾನ ಮತ್ತು ಆಶ್ರಯ ನಿವೇಶನದ ಜಾಗ ವತ್ತುವರಿಯಾಗಿದೆ. ಅಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸಲಾಗಿದೆ. ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ಕೊಡವತ್ತಿ ಗ್ರಾಮದ ಸರ್ವೆ ನಂಬರ್ 32 ಮತ್ತು 47 ಸರ್ಕಾರಿ ಜಮೀನು ರಕ್ಷಿಸಿ, ಆಶ್ರಯ ನಿವೇಶನಕ್ಕೆ ಮೀಸಲಿಡಬೇಕು. ಗುಂಡು ತೋಪು ರಕ್ಷಿಸಬೇಕು. ಕೊತ್ತಗೆರೆ ಹೋಬಳಿಯ ಶೆಟ್ಟಿಗೆರೆ–ಕೆಂಪಸಾಗರ ನಕಾಶೆ ದಾರಿ ವತ್ತುವರಿಯಾಗಿದೆ. ಅದನ್ನು ತೆರವುಗೊಳಿಸಬೇಕು. ಮಾಸ್ತಿ ಅಯ್ಯನಪಾಳ್ಯ ಮತ್ತು ಬಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಇವೆಲ್ಲಕ್ಕೂ ಗಮನ ಹರಿಸಬೇಕು. ಸದ್ಯಕ್ಕೆ ಟ್ಯಾಂಕರ್ ಮೂಲಕ ನೀರು ನೀಡಬೇಕು ಎಂದು ಶಾಸಕ ಡಾ.ರಂಗನಾಥ್, ಇಒ ವಸಂತ್ ಕುಮಾರ್ ಅವರಿಗೆ ಸೂಚನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-17-1098550048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.