ಕುಣಿಗಲ್: ತಾಲ್ಲೂಕಿನ ಎಡೆಯೂರು ಹೋಬಳಿಯ ತಟ್ಟೆಕೆರೆ ಗ್ರಾಮದ ಅವಧೂತ ಸಿದ್ದಪ್ಪಾಜಿ ಸ್ವಾಮಿ (85) ವಯೋಸಹಜ ಅನಾರೋಗ್ಯದಿಂದ ಬುಧುವಾರ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾದರು.

ತಾಲ್ಲೂಕಿನ ಜಲಧಿಗೆರೆ ಮೂಲದವರಾಗಿದ್ದು, 30 ವರ್ಷಗಳ ಹಿಂದೆ ತಟ್ಟೆಕೆರೆ ಗ್ರಾಮಕ್ಕೆ ಬಂದು ನೆಲೆಸಿದ್ದರು. ಪ್ರಶಾಂತ ವಾತಾವರಣದ ಗುಡಿಸಲಿನಲ್ಲಿ ನೆಲೆಸಿದ್ದು, ಸಾಕಷ್ಟು ಸಂಖ್ಯೆಯ ಭಕ್ತರನ್ನು ಹೊಂದಿದ್ದರು. ನಿತ್ಯ ನೂರಾರು ಭಕ್ತರು ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದರು.

ಭಕ್ತರಿಗೆ ಕಷಾಯ, ಭೋಜನ ನೀಡುವುದರ ಜತೆಗೆ ಭಕ್ತರು ತಂದು ಕೊಡುತ್ತಿದ್ದ ಹಣ್ಣನ್ನು ಭಕ್ತರಿಗೇ ನೀಡುತ್ತಿದ್ದರು. ಇತ್ತೀಚೆಗೆ ಧ್ಯಾನ ಮಂದಿರ ನಿರ್ಮಿಸಿ ಗಮನ ಸೆಳೆದಿದ್ದರು. ಗುರುವಾರ ಮಧ್ಯಾಹ್ನ 12 ಗಂಟೆಗೆ ಆಶ್ರಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಗುಬ್ಬಿ: ಪಟ್ಟಣದ ಭಾರತ್ ಪೆಟ್ರೋಲ್ ಬಂಕ್ ಮಾಲೀಕರಾದ ಶಕುಂತಲಾ (72) ಅನಾರೋಗ್ಯದಿಂದ ಬುಧವಾರ ನಿಧನರಾದರು.

ಅವಿವಾಹಿತರಾಗಿದ್ದ ಶಕುಂತಲಾ ಹೋರಾಟದಲ್ಲಿಯೇ ಬದುಕು ಕಟ್ಟಿಕೊಂಡು ಪೆಟ್ರೋಲ್ ಬಂಕ್ ಸ್ಥಾಪಿಸಿದ್ದರು.

ಪಟ್ಟಣದಲ್ಲಿ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-1372356722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.