ತುಮಕೂರು: ಕೇಂದ್ರ ಸರ್ಕಾರದ ನೂತನ ಕಾರ್ಮಿಕ ಸಂಹಿತೆಗಳು ದೇಶದ ದುಡಿಯುವ ಜನತೆಯನ್ನು ನವ ಗುಲಾಮಗಿರಿಗೆ ತಳ್ಳುತ್ತವೆ ಎಂದು ಸಿಐಟಿಯು ರಾಜ್ಯ ಘಟಕದ ಅಧ್ಯಕ್ಷ ಮೀನಾಕ್ಷಿ ಸುಂದರಂ ಹೇಳಿದರು.

ನಗರದಲ್ಲಿ ಭಾನುವಾರ ಸಿಐಟಿಯು ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕ ಸಂಹಿತೆ ಸಮಾಜವನ್ನು ಹಿಮ್ಮುಖ ಚಲನೆಗೆ ಕೊಂಡೊಯ್ಯುತ್ತಿವೆ. ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಶ್ರಮ ಶಕ್ತಿಯ ಮೌಲ್ಯ ಮಾತ್ರ ಹೆಚ್ಚಾಗುತ್ತಿಲ್ಲ. ಕಾರ್ಮಿಕರ ಕೂಲಿ ಜಾಸ್ತಿಯಾಗುತ್ತಿಲ್ಲ. ಅಲ್ಪ ಕೂಲಿಗೆ ದುಡಿಯುತ್ತಿದ್ದಾರೆ. ಕನಿಷ್ಠ ವೇತನ ಜಾರಿಗೆ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕಮಲಾ, ‘ಜನತೆಯ ಕೊಳ್ಳುವ ಶಕ್ತಿ ಹೆಚ್ಚಿಸದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಬಂಡವಾಳಶಾಹಿ ವ್ಯವಸ್ಥೆ ಕೇವಲ ಬೆರಳೆಣಿಕೆಯಷ್ಟು ಕಾರ್ಪೊರೇಟ್ ಬಂಡವಾಳಗಾರರ ಲಾಭಕ್ಕಾಗಿ ದುಡಿಯುತ್ತಿದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಕನಿಷ್ಠ ಕೂಲಿ ನಿಗದಿ ಪಡಿಸಬೇಕು’ ಎಂದು ಒತ್ತಾಯಿಸಿದರು.

ಕಳೆದ 6-7 ವರ್ಷಗಳಿಂದ ಕನಿಷ್ಠ ಕೂಲಿ ಪರಿಷ್ಕರಿಸದ ರಾಜ್ಯ ಸರ್ಕಾರದ ತೀರ್ಮಾನ ವಿರೋಧಿಸಿ, ಕೂಲಿ ನಿಗದಿಗೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಮೇ 18ರಿಂದ 28ರ ವರೆಗೆ ಸಹಿ ಸಂಗ್ರಹ ಚಳವಳಿ ನಡೆಸಲು ತೀರ್ಮಾನಿಸಲಾಯಿತು.

ಸಿಐಟಿಯು ಜಿಲ್ಲಾ ಅಧ್ಯಕ್ಷ ಸೈಯದ್ ಮುಜೀಬ್, ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ಮುಖಂಡರಾದ ಬಿ.ಉಮೇಶ್, ಗುಲ್ಜಾರ್ ಬಾನು, ಟಿ.ಆರ್.ರಂಗಧಾಮಯ್ಯ, ಶಿವಕುಮಾರಸ್ವಾಮಿ, ಸುಜಿತ್ ನಾಯಕ್, ಅಬ್ದುಲ್ ಮುನಾಫ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-17-2047721776

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.