ತುಮಕೂರು: ನಾಲ್ಕು ಕಾರ್ಮಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆ ಖಂಡಿಸಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಕಾರ್ಮಿಕರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಯಿತು. ಪ್ರತಿಭಟನಾಕಾರರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದರು. ಅಧಿಸೂಚನೆಯ ಪ್ರತಿಗಳನ್ನು ಸುಟ್ಟು ಆಕ್ರೋಶ ಹೊರ ಹಾಕಿದರು. ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳಲು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸಂಹಿತೆ ಅನುಷ್ಠಾನಕ್ಕೆ ತರಬಾರದು. ಸಂವಿಧಾನದ ಅಧಿಕಾರ ಬಳಸಿ ಕಾರ್ಮಿಕರ ಪರ ತಿದ್ದುಪಡಿ ಮಾಡಬೇಕು. ನಂತರ ಜಾರಿಗೊಳಿಸಬೇಕು’ ಎಂದು ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ಮುಜೀಬ್ ಒತ್ತಾಯಿಸಿದರು.

ಮುನಿಸಿಪಲ್ ಕಾರ್ಮಿಕ ಚಳವಳಿ ಮುಖಂಡ ಮಾರುತಿ, ‘ಹಿಂದೆ ನಮ್ಮನ್ನು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದರು. ಕಾಯ್ದೆ, ಕಾನೂನು ಬಂದ ನಂತರ ಸ್ವಲ್ಪ ನೆಮ್ಮದಿ ಸಿಕ್ಕಿತ್ತು. ಈಗ ಕಾನೂನು ಬದ್ಧ ಜೀತಗಾರಿಕೆ ತರಲು ಕೇಂದ್ರ ಹವಣಿಸುತ್ತಿದೆ. ನಮ್ಮ ಮಕ್ಕಳ ಭವಿಷ್ಯದ ಮೇಲೆ ಕೈ ಹಾಕುವ ಸಂಹಿತೆ ಒಪ್ಪಲು ಸಾಧ್ಯವಿಲ್ಲ’ ಎಂದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ, ‘ರಾಜ್ಯ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಪಡಿಸಬೇಕು. ಕಾರ್ಮಿಕರ ಹಿತ ಕಾಯಲು ಸಂಹಿತೆಗೆ ತಿದ್ದುಪಡಿ ತರಬೇಕು’ ಎಂದು ಆಗ್ರಹಿಸಿದರು.

ವಿವಿಧ ಸಂಘಟನೆಗಳ ಮುಖಂಡರಾದ ಮಿನಾಕ್ಷಿ, ಎ.ಲೋಕೇಶ್, ಗಣಪತಿ, ರಂಗಧಾಮಯ್ಯ, ಮಂಜುನಾಥ್, ಖಲಿಲ್, ಟಿ.ಆರ್.ಕಲ್ಪನಾ, ಹುಚ್ಚೇಗೌಡ, ಮಧುಸೂದನ್, ಆನಂದ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-17-1599417397

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.