ಶಿರಾ: ತಾಲ್ಲೂಕಿನ ಲಕ್ಕನಹಳ್ಳಿಯಲ್ಲಿಈದ್ ಉಲ್ ಫಿತ್ರ್ ಸಂಭ್ರಮದಲ್ಲಿ ಸಹ ಖಬರ ಸ್ಥಾನಕ್ಕೆ (ಸ್ಮಶಾನ) ಜಾಗ ನೀಡುವಂತೆ ಮುಸ್ಲಿಮರು ಒತ್ತಾಯಿಸಿದ್ದಾರೆ.

ಶನಿವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು ಸ್ಮಶಾನಕ್ಕೆ ಜಾಗ ನೀಡಲು ಸರ್ಕಾರವನ್ನು ಒತ್ತಾಯಿಸಿದರು.

ಲಕ್ಕನಹಳ್ಳಿಯಲ್ಲಿ ಖಬರ ಸ್ಥಾನಕ್ಕೆ ಜಾಗವಿಲ್ಲದೆ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ಆದರೆ ಇಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದು, ಇಲ್ಲಿ ಅಂತ್ಯಕ್ರಿಯೆ ನಡೆಸಲು ಕಷ್ಟವಾಗುತ್ತಿದೆ. ಸ್ವಲ್ಪ ದಿನಗಳ ಹಿಂದೆ ಲಕ್ಕನಹಳ್ಳಿ ಗ್ರಾಮದ ಒಂದೇ ಕುಟುಂಬದ ಐದು ಮಂದಿ ತುಮಕೂರಿನಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಸ್ವಗ್ರಾಮದಲ್ಲಿ ಸ್ಮಶಾನ ಜಾಗದ ಸಮಸ್ಯೆಯಿಂದಾಗಿ ಶಿರಾದಲ್ಲಿ ಅಂತ್ಯಕ್ರಿಯೆ ನಡೆಸಬೇಕಾಯಿತು. ಮೃತರನ್ನು ನೆಮ್ಮದಿಯಿಂದ ಅಂತ್ಯಕ್ರಿಯೆ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಅಳಲು ತೋಡಿಕೊಂಡರು.

ಖಬರ ಸ್ಥಾನಕ್ಕೆ ಜಾಗ ನೀಡುವಂತೆ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಮನವಿ ಮಾಡಲಾಗಿದೆ. ಸಚಿವ ಜಮೀರ್ ಅಹಮದ್ ಖಾನ್ ಸೇರಿದಂತೆ ಸಮುದಾಯದ ಮುಖಂಡರ ಗಮನಕ್ಕೆ ತಂದಿದ್ದರೂ ಇದುವರೆಗೆ ಸ್ಪಂದಿಸಿಲ್ಲ. ಸರ್ಕಾರ ಈಗಲಾದರೂ ಖಬರ ಸ್ಥಾನಕ್ಕೆ ಜಾಗ ನೀಡುವಂತೆ ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-17-592025426

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.