ತುಮಕೂರು: ರಾಜ್ಯದಲ್ಲಿ ಸುಮಾರು 40 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದವು. ಕಳೆದ ಒಂದೂವರೆ ವರ್ಷದಲ್ಲಿ 14 ಲಕ್ಷ ಜಮೀನುಗಳ ವಾರಸುದಾರರ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಮೇ 20ರಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅಧಿಕಾರಿಗಳ ಜತೆಗೆ ಪೂರ್ವಭಾವಿ ಸಭೆ ನಡೆಸಿ, ನಂತರ ಸುದ್ದಿಗಾರರ ಜತೆಗೆ ಮಾತನಾಡಿದರು.

ರಾಜ್ಯದಾದ್ಯಂತ ಪೌತಿ ಖಾತೆ, ಪೋಡಿ ದುರಸ್ತಿ ಆಂದೋಲನ ಮಾಡಲಾಗುತ್ತಿದೆ. 2018ರಿಂದ 2023ರ ವರೆಗೆ 8,500 ಪೋಡಿ ದುರಸ್ತಿ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ‘ನನ್ನ ಭೂಮಿ’ ಅಭಿಯಾನದಡಿ 2.52 ಲಕ್ಷ ರೈತರ ಜಮೀನಿಗೆ ಪೋಡಿ ದುರಸ್ತಿ ಆಗಿದೆ ಎಂದು ವಿವರಿಸಿದರು.

ಹಟ್ಟಿ, ತಾಂಡಾ, ಕ್ಯಾಂಪ್ಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಲಾಗುತ್ತಿದೆ. 2017ರಿಂದ 2023ರ ವರೆಗೆ 1.06 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿತ್ತು. ನಮ್ಮ ಆಡಳಿತದ ಕಳೆದ ಎರಡೂವರೆ ವರ್ಷದಲ್ಲಿ 2.20 ಲಕ್ಷ ಮನೆಗೆ ಹಕ್ಕುಪತ್ರ ವಿತರಿಸಲಾಗಿದೆ. ಇನ್ನೂ 2 ಲಕ್ಷ ಬಾಕಿ ಇದೆ. ಗಣತಿ ನಡೆಯುತ್ತಿರುವುದರಿಂದ ವಿಳಂಬವಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಇದುವರೆಗೆ 1.06 ಜಮೀನು ಮಾಲೀಕರಿಗೆ ಪೌತಿ ಖಾತೆ, 24,256 ಪೋಡಿ ದುರಸ್ತಿ, 20,666 ಜನರಿಗೆ ಹಕ್ಕುಪತ್ರ ನೀಡಲಾಗಿದೆ. 3 ವರ್ಷದ ಸಾಧನಾ ಸಮಾವೇಶದಲ್ಲಿ ಎಲ್ಲ ಅರ್ಹರಿಗೆ ಕಂದಾಯ ದಾಖಲೆ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ 83 ಕೋಟಿ ಪುಟಗಳ ಮೂಲ ಕಡತಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 122 ತಾಲ್ಲೂಕು, 3 ಉಪವಿಭಾಗಾಧಿಕಾರಿ ಕಚೇರಿ, 1 ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಜಿಟಲೀಕರಣ ಮುಗಿದಿದೆ. ಇದಕ್ಕಾಗಿ ₹120 ಕೋಟಿ ವ್ಯಯಿಸಲಾಗಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಇದು ಮುಕ್ತಾಯವಾಗಲಿದೆ. ಜನರು ಕಂದಾಯ ದಾಖಲೆಗಾಗಿ ಕಚೇರಿಗೆ ಅಲೆಯುವುದನ್ನು ತಪ್ಪಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ರಾಜ್ಯ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-17-1877334987

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.