ತುಮಕೂರು: ಸರ್ಕಾರದ ಪರವಾನಗಿ ಪಡೆದ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ. ಅವರ ಉಳಿದ ಎಲ್ಲ ಬೇಡಿಕೆ ಈಡೇರಿಸಲು ಸರ್ಕಾರ ಸಿದ್ಧವಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕಳೆದ ವಾರ ಭೂಮಾಪಕರ ಜತೆಗೆ ಮಾತುಕತೆ ನಡೆಸಿದ್ದಾಗಲೇ ಈ ವಿಷಯ ಅವರ ಗಮನಕ್ಕೆ ತರಲಾಗಿದೆ’ ಎಂದರು.

ಸೇವೆ ಕಾಯಂ ಅಥವಾ ವೇತನ ನಿಗದಿಪಡಿಸುವಂತೆ ಪರವಾನಗಿ ಭೂಮಾಪಕರು ಪಟ್ಟು ಹಿಡಿದಿದ್ದಾರೆ. ಸೇವೆ ಕಾಯಂ ಮಾಡುವ ಆಯ್ಕೆ ಸರ್ಕಾರದ ಮುಂದಿಲ್ಲ. ಅವರ ಆದಾಯಕ್ಕೆ ಯಾವುದೇ ಕೊರತೆ ಆಗುತ್ತಿಲ್ಲ. ಕೆಲಸಕ್ಕೆ ತಕ್ಕಷ್ಟು ಗೌರವ ಧನ ಸಿಗುತ್ತಿದೆ. ಉತ್ತಮವಾಗಿ ಕೆಲಸ ಮಾಡುವವರಿಗೆ ಒಳ್ಳೆಯ ಸಂಭಾವನೆ ದೊರೆಯುತ್ತಿದೆ ಎಂದರು.

ಭೂಮಾಪಕರು ಕಳೆದ ಮೂರು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅದರಿಂದ ಕಂದಾಯ ಇಲಾಖೆ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡು ಅಮಾನತು ಮಾಡಿದರೆ, ಐದು ನಿಮಿಷಕ್ಕೆ ತಡೆ ಕೊಡುವುದಕ್ಕೆ ಬೇರೆಯವರು ಕಾಯುತ್ತಾ ಇರುತ್ತಾರೆ. ಅಧಿಕಾರಿ ಮತ್ತೆ ವಾಪಸ್ ಬಂದು ಅದೇ ಜಾಗದಲ್ಲಿ ಕುಳಿತುಕೊಳ್ಳುತ್ತಾರೆ. ಮತ್ತಷ್ಟು ರಾಜಾರೋಷವಾಗಿ ಇರುತ್ತಾರೆ ಎಂದು ಕೃಷ್ಣ ಬೈರೇಗೌಡ ಅಸಹಾಯಕತೆ ವ್ಯಕ್ತಪಡಿಸಿದರು.

ಕಳೆದ 20 ವರ್ಷದಲ್ಲಿ ಆಡಳಿತ ವ್ಯವಸ್ಥೆಯಲ್ಲಿ ಉತ್ತರದಾಯಿತ್ವ ಬಹಳ ಕಡಿಮೆಯಾಗಿದೆ. ಒಳ್ಳೆಯ ಕೆಲಸ ಮಾಡುವ ಅರ್ಧ ಜನ ಇದ್ದಾರೆ. ಕೆಲವರು ನಾವು ತಾಕೀತು ಮಾಡಿದರೆ ಕೆಲಸ ಮಾಡುತ್ತಾರೆ. ಇದೆಲ್ಲದಕ್ಕೂ ಮೀರಿದವರೂ ಒಂದಷ್ಟು ಜನರಿದ್ದಾರೆ. ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ಹಾಕಲು ಆಗುವುದಿಲ್ಲ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-51-1617769361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.