ತುಮಕೂರು: ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡು ಧರಣಿ ನಡೆಸಲು ಮುಂದಾಗಿದ್ದ ಭೂಮಿ ಮತ್ತು ವಸತಿ ವಂಚಿತರನ್ನು ನಗರ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಮೇ 19ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ 3 ವರ್ಷದ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಇದಕ್ಕೆ ಒಂದು ದಿನ ಮುಂಚಿತವಾಗಿ ಧರಣಿ ಆರಂಭಿಸಲು ಯೋಜಿಸಿದ್ದರು. ಇದಕ್ಕೆ ಪೊಲೀಸರು ಅವಕಾಶ ನೀಡಿಲ್ಲ.

ಭೂ ಮತ್ತು ವಸತಿ ವಂಚಿತರ ಹೋರಾಟ ಸಮಿತಿ ನೇತೃತ್ವದಲ್ಲಿ ತುಮಕೂರು, ಕೊರಟಗೆರೆ, ಮಧುಗಿರಿ, ಚಿಕ್ಕನಾಯಕನಹಳ್ಳಿ ಸೇರಿ ವಿವಿಧ ತಾಲ್ಲೂಕಿನ ಭೂಮಿ, ವಸತಿ ವಂಚಿತರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದರು. ಸೋಮವಾರ ಬೆಳಗಿನ ಜಾವ ಲಾರಿ, ಆಟೊ, ಟೆಂಪೋದಲ್ಲಿ ಬಂದು ಗುಡಿಸಲು ನಿರ್ಮಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.

ವಿಷಯ ತಿಳಿದ ಕೂಡಲೇ ಡಿವೈಎಸ್ಪಿ ಕೆ.ಆರ್.ಚಂದ್ರಶೇಖರ್, ನಗರ ಠಾಣೆ ಇನ್ಸ್ಪೆಕ್ಟರ್ ಅವಿನಾಶ್ ಮತ್ತು ತಂಡದವರು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಹೋರಾಟದಿಂದ ಹಿಂದೆ ಸರಿಯಲು ಒಪ್ಪಲಿಲ್ಲ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಪೊಲೀಸರು 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಬೆಳ್ಳಾವಿ, ಕೋಳಾಲ ಠಾಣೆಗೆ ಕರೆದುಕೊಂಡು ಹೋದರು. ಭೂಮಿ, ವಸತಿ ವಂಚಿತರು ಬೆಳ್ಳಾವಿ ಠಾಣೆ ಮುಂಭಾಗದಲ್ಲಿಯೂ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿದರು.

ಸಂಜೆಯ ನಂತರ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಹಂದ್ರಾಳ್ ನಾಗಭೂಷಣ್, ಮಂಜುನಾಥ್, ಸಂತೋಷ್, ನರಸಿಂಹಮೂರ್ತಿ ಎಂಬುವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು. ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-17-119261628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.