ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾ ಸಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ 432 ಸರ್ಕಾರಿ ಪದವಿ ಕಾಲೇಜುಗಳಿವೆ. 6 ಸಾವಿರ ಕಾಯಂ ಉಪ ನ್ಯಾಸಕರಲ್ಲಿ ಈಗಾಗಲೇ 3 ಸಾವಿರಕ್ಕೂ ಹೆಚ್ಚು ಮಂದಿ ನಿವೃತ್ತಿ ಹೊಂದಿದ್ದಾರೆ. ಉಳಿದ 3 ಸಾವಿರ ಉಪನ್ಯಾಸಕರ ಜತೆಗೆ 12 ಸಾವಿರ ಅತಿಥಿ ಉಪನ್ಯಾಸಕರ ನೆರವಿ ನೊಂದಿಗೆ ಕಾಲೇಜಿನಲ್ಲಿ ತರಗತಿಗಳು ನಡೆಯುತ್ತಿವೆ. ಇದರಿಂದಾಗಿ ಗುಣ ಮಟ್ಟದ ಶಿಕ್ಷಣ ಸಿಗುತ್ತಿಲ್ಲ. ತಕ್ಷಣ ಕಾಯಂ ಉಪನ್ಯಾಸಕರನ್ನು ನೇಮಕ ಮಾಡಿ ಕೊಳ್ಳಬೇಕು ಎಂದು ಒತ್ತಾಯಿಸಿದರು.

ತರಗತಿಗಳು ಆರಂಭವಾಗಿ ತಿಂಗಳು ಕಳೆದಿದ್ದರೂ ಈವರೆಗೂ ಅತಿಥಿ ಉಪನ್ಯಾಸಕರನ್ನೂ ನೇಮಕ ಮಾಡಿಲ್ಲ. ಈ ವರ್ಷ 12 ಸಾವಿರ ಅತಿಥಿ ಉಪನ್ಯಾಸಕರ ನೇಮಕಕ್ಕೆ 55 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದರೂ ನೇಮಕಾತಿ ಮಾತ್ರ ನಡೆದಿಲ್ಲ. ಕಾಯಂ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅಸಮರ್ಥವಾಗಿರುವ ರಾಜ್ಯ ಸರ್ಕಾರ, ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಕಾಲೇಜುಗಳಲ್ಲಿ ಬಡವರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿದ್ದಾರೆ. ಇಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗದಂತಾಗಿದೆ. ಕಾಯಂ ಪ್ರಾಂಶುಪಾಲರು, ಉಪನ್ಯಾಸಕರು ಇಲ್ಲವಾಗಿದ್ದಾರೆ. ಅತಿಥಿ ಉಪನ್ಯಾಸಕರೂ ಇಲ್ಲದೆ ಶೈಕ್ಷಣಿಕ ವ್ಯವಸ್ಥೆಯೇ ಬುಡ ಮೇಲಾಗುತ್ತಿದೆ. ವಿಶ್ವವಿದ್ಯಾಲಯಗಳಿಂದ ಹೊರ ಬರುತ್ತಿರುವ ಪದವೀಧರರ ಭವಿಷ್ಯ ಅತಂತ್ರವಾಗಿದೆ. ಕೆಲವೇ ವರ್ಷಗಳಲ್ಲಿ ಪದವಿ ಕಾಲೇಜುಗಳನ್ನು ನಿರ್ನಾಮ ಮಾಡಲು ಸರ್ಕಾರ ಪಣತೊಟ್ಟಂತಿದೆ ಎಂದು ಗುಡುಗಿದರು.

ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಹಲವು ಕಾರಣ ಮುಂದಿಟ್ಟುಕೊಂಡು ವಿಳಂಬ ಧೋರಣೆ ಅನುಸರಿಸುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಯುಜಿಸಿ ನಿಯಮಾವಳಿ ಅನ್ವಯ ಅರ್ಹತೆ ಪಡೆದವರನ್ನು ನೇಮಿಸಿಕೊಳ್ಳಬೇಕು. ಕಾಲೇಜುಗಳಲ್ಲಿ ಪ್ರಯೋಗಾಲಯ ಸಲಕರಣೆ, ಕಂಪ್ಯೂಟರ್, ಇನ್ನಿತರ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.