ತುಮಕೂರು: ಅಂಗವಿಕಲ, ಬುದ್ಧಿಮಾಂದ್ಯ ಮಕ್ಕಳು ಮನೆಯಿಂದ ಹೊರಗೆ ಬಾರದಂತೆ ತಡೆದು ಬಂಧಿಸಿಡುವುದು ಕಾನೂನು ಪ್ರಕಾರ ಅಪರಾಧ. ಶಿಕ್ಷೆಗೂ ಗುರಿಯಾಗಬೇಕಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ ಎಚ್ಚರಿಸಿದರು.

ನಗರದಲ್ಲಿ ಮಂಗಳವಾರ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೊಬಿಲಿಟಿ ಇಂಡಿಯಾ, ಅಂಗವಿಕಲ ಮಕ್ಕಳೊಂದಿಗೆ ಕಾರ್ಯನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಅಂಗವಿಕಲ ಮಕ್ಕಳು ಹಾಗೂ ಆರೈಕೆದಾರರೊಂದಿಗೆ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಂಗವಿಕಲ ಮಕ್ಕಳನ್ನು ಕೂಡಿ ಹಾಕಿದರೆ ಶಿಕ್ಷೆ ವಿಧಿಸಲು ಅವಕಾಶವಿದೆ. ಇಂತಹ ಕಾರ್ಯಕ್ಕೆ ಯಾರೂ ಸಹ ಕೈ ಹಾಕಬಾರದು. ಮಕ್ಕಳ ಆರೈಕೆಗಾಗಿ ಇರುವ ಡೇ ಕೇರ್ ಸೆಂಟರ್, ವಸತಿ ಶಾಲೆಗಳಿಗೆ ಸೇರಿಸಬೇಕು ಎಂದು ಸಲಹೆ ಮಾಡಿದರು.

ಗರ್ಭಾವಸ್ಥೆಯಲ್ಲೇ ಮಗುವಿನ ಸ್ಥಿತಿಯನ್ನು ಕಂಡು ಹಿಡಿಯುವಷ್ಟು ತಂತ್ರಜ್ಞಾನ ಮುಂದುವರಿದಿದೆ. ಆದರೂ ಅಂಗವಿಕಲ ಮಕ್ಕಳು ಜನಿಸುವುದನ್ನು ಕಂಡು ಹಿಡಿಯುವುದು ಕಷ್ಟಕರವಾಗುತ್ತಿದೆ ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ, ‘ಅಂಗವಿಕಲ ಮಕ್ಕಳಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ದೊರಕಿಸುವ ಸಂಬಂಧ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳಲ್ಲಿ ಆಗುತ್ತಿರುವ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

ಮೊಬಿಲಿಟಿ ಇಂಡಿಯಾ ಸಂಸ್ಥೆ ಕಾರ್ಯಕಾರಿ ನಿರ್ದೇಶಕ ಅಲ್ಬಿನಾ ಶಂಕರ್, ‘ಸಾಮಾಜಿಕ ಭದ್ರತಾ ಸೌಲಭ್ಯಗಳೊಂದಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಬಹಳ ಮುಖ್ಯವಾಗಬೇಕು’ ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಹಿರಿಯ ಕಾರ್ಯಕ್ರಮ ವ್ಯವಸ್ಥಾಪಕ ಎಸ್.ಎನ್.ಆನಂದ್, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಬಿ.ಎಸ್.ಚಿದಾನಂದಮೂರ್ತಿ, ಸಬ್ಇನ್ಸ್ಪೆಕ್ಟರ್ ಬಾಬು ಕಿಲಾರಿ, ಹೆಲನ್ ಕೆಲರ್ ಸಂಸ್ಥೆ ನಿರ್ದೇಶಕಿ ಎಂ.ಎಸ್.ಗಾಯತ್ರಿ, ಹಿರೇಮಠ್, ಚೈತನ್ಯ, ಸಂಗಮೇಶ್ವರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.