ಮಧುಗಿರಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಬುಧವಾರ 20 ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.

ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಸರ್ಕಾರಿ ಹಾಗೂ ಗೋಮಾಳದ ಜಾಗಗಳನ್ನು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವ ಕಾರಣಕ್ಕೆ ಸರ್ಕಾರಿ ಕಚೇರಿಗಳಿಗೆ ಜಾಗವೇ ಇಲ್ಲದಂತಾಗಿದೆ. ಸರ್ಕಾರಿ ಜಾಗವನ್ನು ಅಕ್ರಮವಾಗಿ ಖಾತೆಗಳನ್ನು ಮಾಡಿಕೊಂಡಿರುವವರನ್ನು ಪತ್ತೆ ಹಚ್ಚಬೇಕು ಎಂದು ಅಧಿಕಾರಿಗಳಿಗೆ ಅದೇಶಿಸಿದರು.

ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿ ಅಡವಿನಾಗೇನಹಳ್ಳಿಯಲ್ಲಿ 18 ಎಕರೆ ಗೋಮಾಳವನ್ನು ಗಂಗಮ್ಮ ಎಂಬುವವರಿಗೆ ಖಾತೆ ಮಾಡಿಕೊಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ಗೆ ಸೂಚಿಸಿದರು.

ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ಮಾಡಬೇಕು ಎಂದರು.

ತುಮಕೂರಿನಲ್ಲಿ ಮೇ 20ರಂದು ನಡೆಯುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ತಾಲ್ಲೂಕಿನಿಂದ 250ಕ್ಕೂ ಹೆಚ್ಚು ಬಸ್ಗಳ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ರಾಜ್ಯ ಸಹಕಾರ ಮಹಾ ಮಂಡಳ ನಿರ್ದೇಶಕ ಎನ್.ಗಂಗಣ್ಣ, ತಹಶೀಲ್ದಾರ್ ಶ್ರೀನಿವಾಸ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-17-968057292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.