ತುಮಕೂರು: ಮಕ್ಕಳನ್ನು ಕಟ್ಟಡ ಕಟ್ಟುವ ಕೆಲಸಕ್ಕೆ ಬಳಸಿಕೊಂಡು, ಅವರಿಗೆ ದೈಹಿಕ ಹಿಂಸೆ ನೀಡಿದ ಆರೋಪದ ಮೇರೆಗೆ ತಾಲ್ಲೂಕಿನ ಅಮಲಾಪುರದ ಜಾಮೀಯಾ ಅರೇಬಿಯಾ ಹಸೀನಿಯಾ ಟ್ರಸ್ಟ್ (ಮದರಸಾ) ಶಿಕ್ಷಕ ಮೌಲಾಲಿ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.

ಏ. 19ರಂದು 24 ಮಕ್ಕಳು ಮದರಸಾದಿಂದ ತಪ್ಪಿಸಿಕೊಂಡು ಹೋಗಿದ್ದರು. ಬೆಂಗಳೂರಿನ ಕೆಆರ್ಎಸ್ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಅವರನ್ನು ರಕ್ಷಿಸಿ, ಮಕ್ಕಳ ಸಹಾಯವಾಣಿ ಕೇಂದ್ರದ ಸಿಬ್ಬಂದಿಗೆ ಒಪ್ಪಿಸಿದ್ದರು. ಅಲ್ಲಿಂದ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಸೇರಿಸಲಾಗಿತ್ತು. ಏ. 23ರಂದು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತ ಸಮಾಲೋಚನೆ ನಡೆಸಿದಾಗ ಮದರಸಾದಲ್ಲಿ ಹಿಂಸೆ ನೀಡುತ್ತಿದ್ದ ವಿಚಾರ ಗೊತ್ತಾಗಿದೆ.

ಬೆಂಗಳೂರು ರೈಲು ನಿಲ್ದಾಣದ ಮಕ್ಕಳ ಸಹಾಯವಾಣಿ ಕೇಂದ್ರದ ಮೇಲ್ವಿಚಾರಕ ನಾಗಭೂಷಣ್ ನೀಡಿದ ದೂರಿನ ಮೇರೆಗೆ ಬೆಂಗಳೂರು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ನಂತರ ಪ್ರಕರಣವನ್ನು ತುಮಕೂರು ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ.

‘ನಮಗೆ ಹುಳು ಇರುವ ಅನ್ನ ಕೊಡುತ್ತಿದ್ದರು. ಊರಿಗೆ ಹೋಗುತ್ತೇವೆ ಎಂದರೆ ಹೊಡೆಯುತ್ತಿದ್ದರು. ಮದರಸಾದಲ್ಲಿ ಗೋಡೆ ಕಟ್ಟುವ ಕೆಲಸ ನಡೆಯುತ್ತಿದ್ದು, ನಮ್ಮಿಂದ ಕೆಲಸ ಮಾಡಿಸುತ್ತಿದ್ದರು. ಇದನ್ನು ತಡೆಯಲು ಆಗದೆ ಅಲ್ಲಿಂದ ಓಡಿ ಬಂದಿದ್ದೇವೆ ಎಂದು ಮಕ್ಕಳು ಹೇಳಿಕೆ ನೀಡಿದ್ದಾರೆ’ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಪ್ರತಿಕ್ರಿಯಿಸಿದರು.

‘24 ಮಕ್ಕಳು ಬಿಹಾರ ರಾಜ್ಯದವರು. ಅವರಿಗೆ ಶಿಕ್ಷಣ ಕೊಡುವ ಉದ್ದೇಶದಿಂದ ಮದರಸಾಗೆ ಕರೆದುಕೊಂಡು ಬರಲಾಗಿತ್ತು. ಅಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ. ಗುಣಮಟ್ಟದ ಆಹಾರ ನೀಡುತ್ತಿರಲಿಲ್ಲ, ಹಲ್ಲೆ ನಡೆಸುತ್ತಿದ್ದರು ಎಂಬುದು ತಿಳಿದು ಬಂದಿದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-17-310757103

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.