ತುಮಕೂರು: ನಗರದ ಮಂಡಿಪೇಟೆಯ ಮಾರಿಯಮ್ಮ ದೇವಾಲಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವಂತೆ ಸ್ಲಂ ಸಮಿತಿ, ಮಾರಿಯಮ್ಮ ಯುವಕರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.

ಜಿ.ಪರಮೇಶ್ವರ ಮತ್ತು ಕನ್ನಿಕಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.

‘ಪರಿಶಿಷ್ಟ ಜಾತಿ ಸಮುದಾಯದ ಜನ ಇಲ್ಲಿ ವಾಸಿಸುತ್ತಿದ್ದಾರೆ. ದೇಗುಲಕ್ಕೆ ಹೊಂದಿಕೊಂಡಿರುವ ಸರ್ಕಾರಿ ಜಾಗವನ್ನು ಅಭಿವೃದ್ಧಿ ಪಡಿಸಬೇಕು. ಈ ಹಿಂದೆ ನಡೆದ ಆಶ್ರಯ ಸಮಿತಿ ಸಭೆಯಲ್ಲಿ ದೇವಸ್ಥಾನಕ್ಕೆ ಜಾಗ ಮಂಜೂರು ಮಾಡಲು ತೀರ್ಮಾನಿಸಲಾಗಿತ್ತು’ ಎಂದು ಸ್ಲಂ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ, ಮುಖಂಡರಾದ ಕಣ್ಣನ್, ಕೃಷ್ಣ, ರಾಜ, ಮಾರಿ, ಮಾಧವನ್, ಅರುಣ್ ಸಚಿವರ ಗಮನಕ್ಕೆ ತಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-17-1027313236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.