ತುಮಕೂರು: ಬೆಂಗಳೂರಿನ ಮಾದಾವರದಿಂದ ತುಮಕೂರಿಗೆ ಮೆಟ್ರೊ ವಿಸ್ತರಿಸುವ ಸಂಬಂಧ ಒಂದು ವಾರದಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಲ್ಲಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಭಾನುವಾರ ಹೇಳಿದರು.

ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ನಗರಕ್ಕೆ ಮೆಟ್ರೊ ಬಂದರೆ ಬೆಂಗಳೂರು–ತುಮಕೂರು ಮಧ್ಯೆ ಸಂಚಾರ ಸುಲಭವಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ನಗರದಲ್ಲಿ ಕಳೆದ ವಾರ ರಾಷ್ಟ್ರೀಯ ಜೂನಿಯರ್ ಅಥ್ಲೆಟೆಕ್ಸ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈಗ ವಿಶ್ವ ಮಹಿಳಾ ಟೆನಿಸ್ ಟೂರ್ನಿ ನಡೆಯುತ್ತಿದೆ. ತಾಲ್ಲೂಕಿನ ಪಿ.ಗೊಲ್ಲಹಳ್ಳಿ ಬಳಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದು, ಸದ್ಯದಲ್ಲಿಯೇ ಕೆಲಸ ಆರಂಭವಾಗಲಿದೆ. ಕಾಮಗಾರಿ ಪೂರ್ಣಗೊಂಡರೆ ಅಂತರರಾಷ್ಟ್ರೀಯ ಮಟ್ಟದ ಪಂದ್ಯ ಆಯೋಜಿಸಲಾಗುತ್ತದೆ. ಈ ಎಲ್ಲ ಕಾರ್ಯಗಳಿಂದ ತುಮಕೂರು ‘ಕ್ರೀಡಾ ನಗರ’ವಾಗಿ ಗುರುತಿಸಿಕೊಳ್ಳುತ್ತಿದೆ ಎಂದರು.

ವಿಶ್ವ ಮಟ್ಟದ ಹಾಕಿ, ಈಜುಕೊಳ ನಿರ್ಮಾಣಕ್ಕೆ ಸರ್ಕಾರದಿಂದ ₹3 ಕೋಟಿ ಬಿಡುಗಡೆಯಾಗಿದೆ. ಇನ್ನೂ ಹೆಚ್ಚಿನ ಅನುದಾನ ತರಲು ಕ್ರಮ ವಹಿಸಲಾಗುತ್ತಿದೆ. ಪ್ರಾಯೋಜಕತ್ವದಡಿ ದಾನಿಗಳಿಂದ ಹಣ ಪಡೆಯಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕ್ರೀಡಾಂಗಣದ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲಿ ಶೂಟಿಂಗ್ ತರಬೇತಿ ಕೇಂದ್ರ ಪ್ರಾರಂಭಿಸಲಾಗಿದೆ. ತರಬೇತುದಾರರನ್ನು ನೇಮಿಸಿದ್ದು, ಶೀಘ್ರದಲ್ಲಿಯೇ ಮಕ್ಕಳಿಗೆ ತರಬೇತಿ ಶುರು ಮಾಡಲಾಗುತ್ತದೆ. ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ರಾಜ್ಯ ಲಾನ್ ಟೆನಿಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸುನೀಲ್ ಯಜಮಾನ್, ಅಮರನಾಥ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-17-2118884332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.