ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ರೈಲ್ವೆ ನಿಲ್ದಾಣ ರಸ್ತೆ; ಸ್ಮಾರ್ಟ್‌ಸಿಟಿಯಡಿ ಅಭಿವೃದ್ಧಿ

Last Updated 24 ಜೂನ್ 2020, 16:40 IST
ಅಕ್ಷರ ಗಾತ್ರ

ತುಮಕೂರು: ನಗರದ ಬಿ.ಎಚ್.ರಸ್ತೆಗೆ ಪರ್ಯಾಯವಾಗಿರುವ ರೈಲ್ವೆ ನಿಲ್ದಾಣ ರಸ್ತೆಯನ್ನು ಸ್ಮಾರ್ಟ್‍ಸಿಟಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಜ್ಯೋತಿಗಣೇಶ್ ತಿಳಿಸಿದರು.

ರೈಲ್ವೆ ನಿಲ್ದಾಣ ರಸ್ತೆ ಸಮೀಪ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿ, ‘ಬಿ.ಎಚ್.ರಸ್ತೆಯ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಕಿರಿದಾದ ಈ ರಸ್ತೆ ವಿಸ್ತರಣೆಗೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸಹಕಾರ ನೀಡಿದ್ದಾರೆ. ಅದಕ್ಕೆ ಇಲ್ಲಿನ ನಿವಾಸಿಗಳಿಗೆ ಧನ್ಯವಾದಗಳು’ ಎಂದು ಹೇಳಿದರು.

ಸ್ಮಾರ್ಟ್‍ಸಿಟಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ. ಈ ಯೋಜನೆ ಮೂಲಕ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ನಗರದ ಜನರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಪಾಲಿಕೆ ಸದಸ್ಯೆ ಗಿರಿಜಾ ಮಾತನಾಡಿ, ‘30 ವರ್ಷಗಳಿಂದ ಈ ರಸ್ತೆ ಅಭಿವೃದ್ಧಿ ಕಂಡಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದರು. ನಾಲ್ಕೈದು ವಾರ್ಡ್‍ಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿರುವ ಶಾಲಾ ಕಾಲೇಜುಗಳು, ಆಸ್ಪತ್ರೆ, ಹಾಸ್ಟೆಲ್‍ಗಳಿಗೆ ಅನುಕೂಲ ಆಗಲಿದೆ’ ಎಂದು ಹೇಳಿದರು.

ಈ ರಸ್ತೆಯಲ್ಲೇ ಸೈಕಲ್ ಟ್ರ್ಯಾಕ್, ವೆಂಡರ್ ಝೂನ್, ಆಟೊ ನಿಲ್ದಾಣ ಮತ್ತು ಬೈಕ್ ನಿಲುಗಡೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಎಂಜಿನಿಯರ್‌ಗಳಾದ ಅಶೋಕ್, ರಶ್ಮಿ, ರವಿವರ್ಮಕುಮಾರ್, ಎಸ್‍ಡಿಎಲ್ ಅಶೋಕ್, ಸ್ಥಳೀಯರಾದ ನಾಗರಾಜಪ್ಪ, ರವೀಶ್, ಪಾಲಿಕೆ ಮತ್ತು ಸ್ಮಾರ್ಟ್‍ಸಿಟಿ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT