ತುಮಕೂರು: ಸಣ್ಣ ಕೈಗಾರಿಕೆಗಳು ಉದ್ಯೋಗ ಸೃಷ್ಟಿ, ಉತ್ಪಾದನೆ ಹೆಚ್ಚಳ ಮತ್ತು ಆರ್ಥಿಕ ಅಭಿವೃದ್ಧಿಯ ಪ್ರಮುಖ ಚಾಲಕ ಶಕ್ತಿ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಬಿ.ಆರ್.ಗಣೇಶ್ ರಾವ್ ಅಭಿಪ್ರಾಯಪಟ್ಟರು.

ನಗರದಲ್ಲಿ ಭಾನುವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ (ಕಾಸಿಯಾ) ಹಮ್ಮಿಕೊಂಡಿದ್ದ ದಕ್ಷಿಣ ಭಾರತ ಮಟ್ಟದ ಸೂಕ್ಷ್ಮ ಹಾಗೂ ಸಣ್ಣ ಕೈಗಾರಿಕೆಗಳ (ಎಂಎಸ್ಎಂಇ) ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಕಾಸಿಯಾ ರಾಷ್ಟ್ರದ ಆರ್ಥಿಕತೆ ಬಲಪಡಿಸಲು, ನಮ್ಮ ದೇಶದ ಯುವಕರಿಗೆ ಸುಸ್ಥಿರ ಉದ್ಯೋಗ ಸೃಷ್ಟಿಸಲು ಕೈಗಾರಿಕೆಗಳ ಸಬಲೀಕರಣಕ್ಕೆ ಶ್ರಮಿಸುತ್ತಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದೆ. ಎಂಎಸ್ಎಂಇಗಳು ಸಮಾವೇಶದ ಮೂಲಕ ತಮ್ಮ ಕೊಡುಗೆ ಸಣ್ಣದಲ್ಲ ಎಂಬುದನ್ನು ಸಾಬೀತು ಪಡಿಸಿವೆ ಎಂದರು.

ಪರಸ್ಪರ ಸಂಪರ್ಕ ಸಾಧಿಸಲು, ಸಹಕಾರ ಬೆಳೆಸಿಕೊಳ್ಳಲು, ಹೊಸ ಅವಕಾಶ ಅನ್ವೇಷಿಸಲು ಸಮಾವೇಶ ಸಹಕಾರಿಯಾಗಿದೆ. ತಾಂತ್ರಿಕ ಅಧಿವೇಶನ, ಚರ್ಚೆ– ಸಂವಾದ, ವಸ್ತು ಪ್ರದರ್ಶನ ಉದ್ಯಮಿಗಳಿಗೆ ಕಲಿಕೆಯ ಅವಕಾಶ ಕಲ್ಪಿಸಿದೆ ಎಂದು ತಿಳಿಸಿದರು.

ಮೆ. ಏಸ್ ಮೈಕ್ರೋಮ್ಯಾಟಿಕ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಟಿ.ಕೆ.ರಮೇಶ್, ‘ಸಣ್ಣ ಕೈಗಾರಿಕೆಗಳಿಂದ ಉತ್ಪಾದನೆಯಾಗುವ ವಸ್ತುಗಳಲ್ಲಿ ಶೇ 40 ರಷ್ಟು ರಫ್ತು ಆಗುತ್ತಿವೆ. ಉದ್ಯಮಿಗಳು ಗುಣಮಟ್ಟ ಕಾಪಾಡಿದರೆ ನಿರೀಕ್ಷಿತ ಯಶಸ್ಸು ಕಾಣಲು ಸಾಧ್ಯ. ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು.

ಸಮಾವೇಶದ ಉಪ ಸಮಿತಿ ಅಧ್ಯಕ್ಷ ಸದಾಶಿವ ಆರ್.ಅಮಿನ್, ‘ಸುಮಾರು 150 ಮಳಿಗೆ ತೆರೆಯಲಾಗಿತ್ತು. ಸಣ್ಣ ಕೈಗಾರಿಕೆ ಆರಂಭಿಸುವ ಉದ್ಯಮಿಗಳಿಗೆ ಇದು ಉಪಯೋಗವಾಗಲಿದೆ’ ಎಂದರು.

ವಸ್ತು ಪ್ರದರ್ಶನದ 12 ಮಳಿಗೆಗಳಿಗೆ ಪ್ರಶಸ್ತಿ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕ ವಿಷ್ಣುವರ್ಧನ್ ರೆಡ್ಡಿ, ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್.ಬಿರಾದರ್, ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹುಸೇನ್, ಪದಾಧಿಕಾರಿಗಳಾದ ಕೇಶವಮೂರ್ತಿ, ವಿ.ದಿನೇಶ್ ಕುಮಾರ್, ಆರ್.ದೊರೈ, ಕೆ.ಆನಂದರಾವ್, ಪಿ.ಎಸ್.ಶ್ರೀಕಂಠದತ್ತ, ಕಿರಣ್ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-17-1771251372

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.