ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆಯಾಗುತ್ತಿದ್ದು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ರದ್ದು ಪಡಿಸಬೇಕು. ಆಯಾ ರಾಜ್ಯಗಳೇ ಸಿಇಟಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್ ಇಲ್ಲಿ ಶನಿವಾರ ಒತ್ತಾಯಿಸಿದರು.

ವರ್ಷಗಳಿಂದ ಅಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲೆಯಲ್ಲಿ ಇಡಲಾಗಿದೆ. ಕೃತ್ಯಕ್ಕೆ ಕಾರಣವಾದ ಎನ್ಟಿಎ ಮುಖ್ಯಸ್ಥರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರಾಷ್ಟ್ರದ ಅಭಿವೃದ್ಧಿಗೂ ಮಾರಕವಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮುಖಂಡ ಕೆಂಚಮಾರಯ್ಯ, ‘ಕೋಚಿಂಗ್ ಸೆಂಟರ್ ಹಾವಳಿಗೆ ವಿದ್ಯಾರ್ಥಿ ಜೀವನ ಹಾಳಾಗುತ್ತಿದೆ. ಬೇರೆ ಸಂದರ್ಭಗಳಲ್ಲಿ ಬೀದಿಗಿಳಿಯುವ ಬಿಜೆಪಿ ಸಂಸದರು, ಶಾಸಕರು, ಎಬಿವಿಪಿ ಪದಾಧಿಕಾರಿಗಳು ಈಗ ಯಾಕೆ ಬಾಯಿ ಬಿಡುತ್ತಿಲ್ಲ. ಕ್ಷುಲ್ಲಕ ವಿಚಾರಗಳಿಗೆ ಜನರ ದಿಕ್ಕು ತಪ್ಪಿಸುವವರಿಗೆ ದೊಡ್ಡ ಹಗರಣ ಕಾಣುತ್ತಿಲ್ಲವೇ’ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ಮುಖಂಡರಾದ ಮಹೇಶ್, ಮಂಜುನಾಥ್, ಗುರುಪ್ರಸಾದ್, ಕುಮಾರಸ್ವಾಮಿ, ಲಿಂಗರಾಜು, ಷಣ್ಮಕಪ್ಪ, ಇರ್ಫಾನ್ ಅಹ್ಮದ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-17-426139874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.