ತುಮಕೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ. ಪ್ರಧಾನಿ ಮೋದಿ ಈ ಕುರಿತು ಇದುವರೆಗೆ ಮಾತನಾಡಿಲ್ಲ. ಇಂತಹ ಪ್ರಧಾನಿಯಿಂದ ಏನು ನಿರೀಕ್ಷಿಸಲು ಸಾಧ್ಯ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ ಪ್ರಶ್ನಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ದಿ.ರಾಜೀವ್ಗಾಂಧಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೆಹರೂ, ಇಂದಿರಾ ಗಾಂಧಿ, ರಾಜೀವ್ಗಾಂಧಿ ದೇಶದ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಿದ್ದರು. ಆದರೆ ಕಳೆದ ಎರಡು ವರ್ಷಗಳಿಂದ ಮಣಿಪುರ ಹೊತ್ತಿ ಉರಿದರೂ ಅಲ್ಲಿಗೆ ಪ್ರಧಾನಿ ಭೇಟಿ ನೀಡಲಿಲ್ಲ. ತಿಂಗಳಿಗೊಂದು ವಿದೇಶಿ ಪ್ರವಾಸ ಮಾಡುವ ಪ್ರಧಾನಿಗೆ ಮಣಿಪುರಕ್ಕೆ ಹೋಗಲು ಸಮಯ ಇಲ್ಲ ಎಂದು ಟೀಕಿಸಿದರು.

ಮಾಜಿ ಶಾಸಕ ರಫೀಕ್ ಅಹ್ಮದ್, ‘ಈ ವರ್ಷದ ಅಂತ್ಯಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸಮರ್ಥವಾಗಿ ಎದುರಿಸಲು ಮುಖಂಡರು, ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ‘ರಾಷ್ಟ್ರದ ಆಡಳಿತ ವ್ಯವಸ್ಥೆಗೆ ತಂತ್ರಜ್ಞಾನದ ಮೂಲಕ ಆಧುನಿಕತೆಯ ವೇಗ ನೀಡಿದವರು ರಾಜೀವ್ಗಾಂಧಿ. ಅವರ ಬದುಕಿನ ಹಾದಿ, ಸಾಧನೆ ಕುರಿತು ಜನತೆಗೆ ತಿಳಿಸಬೇಕು. ಬಿಜೆಪಿಯ ಜನ ವಿರೋಧಿ ನೀತಿ ಖಂಡಿಸಬೇಕು’ ಎಂದರು.

ಮುಖಂಡರಾದ ಆರ್.ರಾಮಕೃಷ್ಣ, ಎಚ್.ಸಿ.ಷಣ್ಮುಖಪ್ಪ, ಸೌಭಾಗ್ಯ, ಮಹೇಶ್, ಫಯಾಜ್, ಪಂಚಾಕ್ಷರಯ್ಯ, ಸೈಯದ್ ದಾದಾಪೀರ್, ಅನಿಲ್ಕುಮಾರ್, ಸಂಜೀವಕುಮಾರ್, ಹಾಲೇನೂರು ವೀರೇಶ್ಕುಮಾರ್, ಕೈದಾಳ ರಮೇಶ್, ಸುಜಾತಾ, ಸುಮಾ, ಕೆಂಪರಾಜು, ಇರ್ಫಾನ್, ಶಿವಾಜಿ, ಕುಮಾರಸ್ವಾಮಿ, ಶಿವರಾಜು, ನ್ಯಾತೇಗೌಡ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-1429999262

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.