ತುಮಕೂರು: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ದೇಶ ಅಧೋಗತಿಗೆ ತಲುಪಿದೆ. ಅಘೋಷಿತ ತುರ್ತು ಪರಿಸ್ಥಿತಿ ಹೇರಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಕೆಂಚಮಾರಯ್ಯ ಟೀಕಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಂಡಿತ್ ಜವಹರಲಾಲ್ ನೆಹರೂ ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೆಹರೂ ರೂಪಿಸಿದ ರಾಜಕೀಯ, ವಿದೇಶಾಂಗ ನೀತಿಗಳು ಇಡೀ ವಿಶ್ವಕ್ಕೆ ಮಾದರಿ. ಪಂಚ ವಾರ್ಷಿಕ ಯೋಜನೆಗಳ ಮೂಲಕ ಶಿಕ್ಷಣ, ಕೈಗಾರಿಕೆ, ಉದ್ಯೋಗ, ಕೃಷಿ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಿದರು. ನೆಹರೂ ಕುಟುಂಬ ದೇಶಕ್ಕಾಗಿ ಏನು ಮಾಡಿದೆ ಎಂದು ಬಿಜೆಪಿ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಚಂದ್ರಶೇಖರ್ಗೌಡ, ‘ಕಾಂಗ್ರೆಸ್ 70 ವರ್ಷಗಳ ಆಡಳಿತದಲ್ಲಿ ಯಾರ ಹಕ್ಕು ಚ್ಯುತಿಗೊಳಿಸಲಿಲ್ಲ. ಬಿಜೆಪಿ ಅಧಿಕಾರದ ಆಸೆಗೆ ಜನರ ಹಕ್ಕು ಕಸಿಯಲು ಮುಂದಾಗಿದೆ. ಎಸ್ಐಆರ್ ನೆಪದಲ್ಲಿ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರಿಗೆ ಮತದಾನ ಹಕ್ಕು ಇಲ್ಲದಂತೆ ವಂಚಿಸಲಾಗುತ್ತಿದೆ’ ಎಂದು ಆರೋಪಿಸಿದರು.

ಮಾಜಿ ಶಾಸಕ ಎಸ್.ಷಫಿ ಅಹ್ಮದ್, ‘ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿಯಾಗಿ ಮಾಡುವಂತೆ ಜಿಲ್ಲಾ ಕಾಂಗ್ರೆಸ್ನಿಂದ ನಿರ್ಣಯ ಮಾಡಿ ಎಐಸಿಸಿಗೆ ಕಳುಹಿಸುವಂತೆ’ ಸಲಹೆ ಮಾಡಿದರು.

ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹ್ಮದ್, ಮುಖಂಡರಾದ ಭಾಗ್ಯಮ್ಮ, ಎಚ್.ಸಿ.ಹನುಮಂತಯ್ಯ, ಷಣ್ಮುಖಪ್ಪ, ಇರ್ಫಾನ್ ಅಹ್ಮದ್, ಕುಮಾರಸ್ವಾಮಿ, ಶಿವರಾಜು, ಉಮಾಶಂಕರ್, ಪಿ.ಶಿವಾಜಿ, ಮಂಜುನಾಥ್, ಸಂಜೀವಕುಮಾರ್, ಅಂಬರೀಶ್, ಸೈಯದ್ ದಾದಾಪೀರ್, ಹದೀಬ್ ಅಹ್ಮದ್, ಶ್ರೀನಿವಾಸಮೂರ್ತಿ, ಕೆಂಪಣ್ಣ, ಶಿವಪ್ರಸಾದ್, ಭೈಲಪ್ಪ, ಸುಜಾತಾ, ಲಕ್ಷ್ಮಿದೇವಮ್ಮ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-17-1884175400

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.