ನಿಟ್ಟೂರು,(ಗುಬ್ಬಿ): ನಿಟ್ಟೂರು ಹೋಬಳಿ ದೊಡ್ಡಗುಣಿ ಮತ್ತು ಕೊಂಡ್ಲಿ ಕ್ರಾಸ್ ನಡುವೆ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿ ಗುರುವಾರ ರಾತ್ರಿ ದೊಡ್ಡಗುಣಿಯಿಂದ ಕೊಂಡ್ಲಿ ಕ್ರಾಸ್ ಕಡೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದೇವರ ಹಟ್ಟಿಯ ಮಹಾಲಿಂಗಯ್ಯ ಗಾಯಗೊಂಡಿದ್ದಾರೆ.

ದೊಡ್ಡಗುಣಿ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ನಾಲೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದರೂ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಅಗತ್ಯ ಕ್ರಮ ಕೈಗೊಳ್ಳದೆ ಇರುವುದರಿಂದ ಹೆದ್ದಾರಿ ಗುಂಡಿ ಬಿದ್ದು ಹಾಳಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಸಂಬಂಧಿಸಿದವರು ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಅಗತ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸದೆ ಇರುವುದರಿಂದ ಪದೇ ಪದೇ ಈ ಪ್ರದೇಶಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-17-210203746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.