ತುಮಕೂರು: ಒಕ್ಕಲಿಗರ ಸಂಘದಿಂದ ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ನಗರದಲ್ಲಿ ಆಸ್ಪತ್ರೆ ಆರಂಭಿಸಬೇಕು ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಸಲಹೆ ಮಾಡಿದರು.

ನಗರದ ಮೆಳೆಕೋಟೆಯಲ್ಲಿ ಸೋಮವಾರ ರಾಜ್ಯ ಒಕ್ಕಲಿಗರ ಸಂಘದ ವಿದ್ಯಾರ್ಥಿನಿಯರ ಹಾಸ್ಟೆಲ್ನ 2 ಮತ್ತು 3ನೇ ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಹಾಸ್ಟೆಲ್ ಪಕ್ಕದಲ್ಲಿ ಸಂಘದ ನಿವೇಶನವಿದ್ದು, ಸಾರ್ವಜನಿಕರ ಉಪಯೋಗಕ್ಕಾಗಿ ಆಸ್ಪತ್ರೆ ನಿರ್ಮಿಸಬೇಕು. ಸಮುದಾಯದ ಭವಿಷ್ಯಕ್ಕಾಗಿ ಆಸ್ತಿ ಸೃಜನೆ ಮಾಡಬೇಕು. ಜಿಲ್ಲಾ ಕೇಂದ್ರಗಳಲ್ಲಿ ಒಂದೊಂದು ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು. ದಾಬಸ್ಪೇಟೆ ಬಳಿ 100 ಎಕರೆ ಜಮೀನು ಖರೀದಿಸಿ, ವಿದ್ಯಾಸಂಸ್ಥೆ ಶುರು ಮಾಡುವ ಉದ್ದೇಶ ಉತ್ತಮವಾಗಿದೆ ಎಂದರು.

ಕುಣಿಗಲ್ನ ಅರೇಶಂಕರ ಮಠದ ಸಿದ್ಧರಾಮ ಚೈತನ್ಯ ಸ್ವಾಮೀಜಿ, ‘ರಾಜಕೀಯ, ಆರ್ಥಿಕ ಶಕ್ತಿ ಹೆಚ್ಚಿಸಿಕೊಳ್ಳಲು ರಾಜ್ಯ ಒಕ್ಕಲಿಗರ ಸಂಘದಿಂದ ಆಗಾಗ ಸಮಾವೇಶ ಏರ್ಪಡಿಸಬೇಕು. ಸಮುದಾಯದ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು. ಅದಕ್ಕಾಗಿ ಸಂಘ ಅಗತ್ಯ ನೆರವು ನೀಡಬೇಕು’ ಎಂದು ಹೇಳಿದರು.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್.ಶ್ರೀನಿವಾಸ್, ‘ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಿ ಆಸ್ಪತ್ರೆ ಆರಂಭದ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಸಂಘದ ನಿರ್ದೇಶಕ ಆರ್.ಹನುಮಂತರಾಯಪ್ಪ, ‘ಹಾಸ್ಟೆಲ್ಗೆ ಬೇಡಿಕೆ ಹೆಚ್ಚಾಗಿದ್ದು, ಹೆಣ್ಣು ಮಕ್ಕಳು ಉಳಿದುಕೊಳ್ಳಲು ಸಮಸ್ಯೆಯಾಗಿದೆ. ಸುಮಾರು ₹6 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಎರಡು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದೆ. ಸುಮಾರು 200 ವಿದ್ಯಾರ್ಥಿನಿಯರಿಗೆ ಆಶ್ರಯ ಸಿಗಲಿದೆ’ ಎಂದು ತಿಳಿಸಿದರು.

ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಬಿ.ಕೆಂಚಪ್ಪಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಗಂಗಾಧರ್, ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ ಅಧ್ಯಕ್ಷ ಲೋಕೇಶ್ ನಾಗರಾಜಯ್ಯ, ಮುಖಂಡರಾದ ವೆಂಕಟರಾಮೇಗೌಡ, ಟಿ.ಆರ್.ನಾಗರಾಜು, ಧರಣೇಂದ್ರಕುಮಾರ್, ಶ್ರೀನಿವಾಸ್, ಮನೋಹರಗೌಡ, ದೇವೇಗೌಡ, ಲಕ್ಕೇಗೌಡ, ಭೈರವ ಗಿರೀಶ್, ಮಂಜುನಾಥ್, ನಟೇಶ್, ಜಯಮ್ಮ, ನಾಗಮಣಿ ಕಾಮೇಶ್, ಪುಟ್ಟಸ್ವಾಮಿ, ರಂಗಪ್ಪ, ನರಸಿಂಹಮೂರ್ತಿ, ಉಪ್ಪಾರಹಳ್ಳಿ ಕುಮಾರ್, ಪ್ರೊ.ವೀರಯ್ಯ, ಮುನಿಸ್ವಾಮಿಗೌಡ, ಲೀಲಾವತಿ, ಮಂಜುಳಾ ಇತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-1598831874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.