ತುಮಕೂರು: ಪಾರ್ಟ್ಟೈಮ್ ಕೆಲಸದ ಆಮಿಷಕ್ಕೆ ಒಳಗಾಗಿ ನಗರದ ಎಸ್ಐಟಿ ಬಡಾವಣೆಯ ವೈದ್ಯೆ ಜಿ.ಯು.ಲಕ್ಷ್ಮಿನಾಗವಣಿ ಎಂಬುವರು ₹4 ಲಕ್ಷ ಕಳೆದುಕೊಂಡಿದ್ದಾರೆ.

ಟೆಲಿಗ್ರಾಮ್ ಮೂಲಕ ಸಂಪರ್ಕಿಸಿದ ಆರೋಪಿಗಳುಕೆಲಸದ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆಲ ಪ್ರಶ್ನೆಗಳಿಗೆ ಉತ್ತರ ನೀಡಿದರೆ ಹಣ ಕೊಡುತ್ತೇವೆ ಎಂದಿದ್ದಾರೆ. ಲಕ್ಷ್ಮಿ ಮೊದಲಿಗೆ ₹800 ವರ್ಗಾಯಿಸಿದ್ದು, ಅವರ ಖಾತೆಗೆ ವಾಪಸ್ ₹1,040 ಜಮಾ ಮಾಡಿದ್ದಾರೆ. ಬಳಿಕ ₹1,050 ವರ್ಗಾವಣೆ ಮಾಡಿದ್ದು, ₹2 ಸಾವಿರ ಹಿಂದಿರುಗಿಸಿದ್ದಾರೆ.

ಇದೇ ರೀತಿಯಾಗಿ ಹೆಚ್ಚಿನ ಹಣ ಹೂಡಿಕೆ ಮಾಡಿ, ನಾವು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದರೆ ದುಪ್ಪಟ್ಟು ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನು ನಂಬಿ ವಿವಿಧ ಖಾತೆಗಳಿಗೆ ಹಂತ ಹಂತವಾಗಿ ₹4,01,500 ವರ್ಗಾಯಿಸಿದ್ದಾರೆ. ನಂತರ 3 ಟಾಸ್ಕ್ ಪೂರ್ಣಗೊಳಿಸಿದರೆ ಹಣ ವಾಪಸ್ ನೀಡಲಾಗುವುದು ಎಂದಿದ್ದಾರೆ. 2 ಟಾಸ್ಕ್ ತಪ್ಪು ಮಾಡಿದ್ದು, ಇನ್ನೂ ಹೆಚ್ಚಿನ ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದಾರೆ.

ಲಕ್ಷ್ಮಿನಾಗವಣಿ ಇದರಿಂದ ಅನುಮಾನಗೊಂಡು ಹೊಸ ಬಡಾವಣೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಂಡು, ಹಣ ವಾಪಸ್ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-747673699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.