ಪಾವಗಡ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ತಾಲ್ಲೂಕಿನ ರಾಜವಂತಿ ಗ್ರಾಮದಲ್ಲಿ ಮಹಿಳೆಯರು ಶುಕ್ರವಾರ ತುಮಕೂರು-ಪಾವಗಡ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನೀರು ಖರೀದಿಸಿ ಕುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಹೊಲ, ಗದ್ದೆಗಳಿಂದ ನೀರು ಹೊತ್ತು ತರಬೇಕಿದೆ ಎಂದು ಪ್ರತಿಭಟನ ನಿರತರು ಆರೋಪಿಸಿದರು.

ಟ್ಯಾಂಕರ್ ಮೂಲಕ ಪೂರೈಸುವ ನೀರು ಸಾಕಾಗುತ್ತಿಲ್ಲ. ಇದರಿಂದ ಮಕ್ಕಳು ಮಹಿಳೆಯರಿಗೆ ನೀರಿನದ್ದೇ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಮಹಿಳೆಯರು ದೂರಿದರು.

ಈ ಕೂಡಲೇ ಕೊಳವೆ ಬಾವಿ ಕೊರೆಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಮಧುಸೂದನ್, ಪೊಲೀಸ್ ಇನ್ಸ್ಪೆಕ್ಟರ್ ಕೆ. ಸುರೇಶ್ ಸ್ಥಳಕ್ಕೆ ತೆರಳಿ ಪ್ರತಿಭಟನೆ ನಿರತರ ಮನವೊಲಿಸಿ ರಸ್ತೆ ತಡೆ ಮಾಡದಂತೆ ತಿಳಿ ಹೇಳಿದರು. ಪೊಲೀಸರು ರಸ್ತೆ ತಡೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-17-900287617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.