ಪಾವಗಡ: ಜಾನುವಾರುಗಳಿಗಾಗಿ ಗೋಶಾಲೆ, ಮೇವು ವಿತರಣಾ ಕೇಂದ್ರ ಶೀಘ್ರ ಆರಂಭಿಸಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆ ತುಮಕೂರು ಜಿಲ್ಲಾ ಅಧ್ಯಕ್ಷ ಪೂಜಾರಪ್ಪ ಒತ್ತಾಯಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇನ್ನೂ ಜಾನುವಾರುಗಳಿಗೆ ಮೇವು, ನೀರಿನ ಅಭಾವ ಇದೆ. ಬೆಟ್ಟ-ಗುಡ್ಡಗಳು, ಆರಣ್ಯ ಪ್ರದೇಶಗಳಲ್ಲಿ ಪ್ರಾಣಿಗಳಿಗೆ ಆಹಾರ, ನೀರಿನ ಕೊರತೆಯಿದೆ. ಕಾಡು ಪ್ರಾಣಿಗಳು ಗ್ರಾಮಗಳತ್ತ ಆಹಾರಕ್ಕಾಗಿ ಬರುವ ಸಂಭವ ಹೆಚ್ಚಿದೆ ಎಂದರು.

ತಾಲ್ಲೂಕು ಆಡಳಿತ ಕೂಡಲೇ ನಾಲ್ಕೂ ಹೋಬಳಿಗಳಲ್ಲಿ ಗೋಶಾಲೆಗಳನ್ನು ಆರಂಭಿಸಬೇಕು. ಜಾನುವಾರುಗಳಿಗೆ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕು. ತುಂಗಾಭದ್ರ ಯೋಜನೆಯಡಿ ಪ್ರತಿ ಗ್ರಾಮಕ್ಕೂ ಕುಡಿಯುವ ನೀರನ್ನು ಪೂರೈಸಲು ಆದ್ಯತೆ ನೀಡಬೇಕು. ಪಶು ಇಲಾಖೆಯಿಂದ ಜಾನುವಾರುಗಳಿಗೆ ಮೇವು ಒದಗಿಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.

ತಹಶೀಲ್ದಾರ್ ವೈ.ರವಿ, ಪಶು ಇಲಾಖೆಯಿಂದ ಜಾನುವಾರುಗಳ ಮಾಹಿತಿ ನಾಲ್ಕೂ ದಿನಗಳಲ್ಲಿ ನೀಡಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಮಧುಸೂದನ್, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಬಸವಲಿಂಗಪ್ಪ, ರೈತ ಸಂಘದ ಅಧ್ಯಕ್ಷ ನರಸಿಂಹರೆಡ್ಡಿ, ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಬ್ಯಾಡನೂರು ಶಿವು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-17-1472075301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.